ಬೆಂಗಳೂರು: ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಚಿವರು, ಅಧಿಕಾರಿಗಳು ತಜ್ಞರೊಂದಿಗೆ ಸಭೆ ನಡೆಸಿ ಜುಲೈ 5 ರಿಂದ 19 ರ ವರೆಗೆ 15 ದಿನಗಳ ಕಾಲ ಅನೇಕ ನಿರ್ಬಂಧ ಸಡಿಲಿಕೆ ಮಾಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.
ಕಚೇರಿ, ಕೈಗಾರಿಕೆ, ವಾಣಿಜ್ಯ ಚಟುವಟಿಕೆ, ಮಾಲ್ ತೆರೆಯಲು ಅವಕಾಶ
ಸರ್ಕಾರಿ, ಖಾಸಗಿ ಕಚೇರಿ, ಕೈಗಾರಿಕೆ, ವಾಣಿಜ್ಯ ಚಟುವಟಿಕೆ ಶೇಕಡ 100 ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಬಹುದು.
ಮಾಲ್ ತೆರೆಯಲು ಅವಕಾಶ
ಮೆಟ್ರೋ ಸೇರಿ ಸಾರ್ವಜನಿಕ ಸಾರಿಗೆ ಶೇಕಡ 100 ಪ್ರಯಾಣಿಕರೊಂದಿಗೆ ಕಾರ್ಯಾಚರಣೆ
ಧಾರ್ಮಿಕ ಸ್ಥಳಗಳಲ್ಲಿ ಭಕ್ತರ ದರ್ಶನಕ್ಕೆ ಅವಕಾಶ
ಮದುವೆ, ಕೌಟುಂಬಿಕ ಶುಭ ಕಾರ್ಯಕ್ರಮಗಳಲ್ಲಿ 100 ಜನರಿಗೆ ಅವಕಾಶ
ಈಜುಕೊಳಗಳಲ್ಲಿ ಕ್ರೀಡಾಪಟುಗಳ ಅಭ್ಯಾಸಕ್ಕೆ ಅವಕಾಶ
ಕ್ರೀಡಾ ಸಂಕೀರ್ಣಗಳಲ್ಲಿ ಕ್ರೀಡಾಪಪಟುಗಳ ಅಭ್ಯಾಸಕ್ಕೆ ಅವಕಾಶ
ಅಂತ್ಯಸಂಸ್ಕಾರ 20 ಜನರಿಗೆ ಅವಕಾಶ ನೀಡಲಾಗಿದೆ.
ವೀಕೆಂಡ್ ಕರ್ಫ್ಯೂ ತೆರವು -ನೈಟ್ ಕರ್ಫ್ಯೂ ಜಾರಿ
ರಾತ್ರಿ 9 ರಿಂದ ಬೆಳಗ್ಗೆ 5 ಗಂಟೆವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ
ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿರುವುದಿಲ್ಲ.
ಸಿನಿಮಾ/ಪಬ್ ಗೆ ಅವಕಾಶ ಇಲ್ಲ -ನಿಯಮ ಪಾಲನೆ ಕಡ್ಡಾಯ
ಸಾಮಾಜಿಕ, ಧಾರ್ಮಿಕ ಸಭೆ ಸಮಾರಂಭ, ಪ್ರತಿಭಟನೆ ಇತರೆ ಸಮಾರಂಭಗಳಿಗೆ ಅವಕಾಶ ಇರುವುದಿಲ್ಲ
ಶೈಕ್ಷಣಿಕ ಸಂಸ್ಥೆಗಳು ತೆರೆಯುವ ಪ್ರತ್ಯೇಕ ತೀರ್ಮಾನ ಮಾಡಲಾಗುವುದು
ಪಬ್ ಗಳಿಗೆ ಅವಕಾಶ ಇಲ್ಲ, ಬಾರ್ ಗಳಿಗೆ ಅವಕಾಶ ನೀಡಲಾಗಿದೆ.
ಚಿತ್ರಮಂದಿರಗಳ ಕಾರ್ಯನಿರ್ವಹಣೆಗೆ ಅವಕಾಶ ಇಲ್ಲ
ಜಿಲ್ಲೆಯ ಪರಿಸ್ಥಿತಿಗೆ ಅನುಗುಣವಾಗಿ ಜಿಲ್ಲಾ ಉಸ್ತುವಾರಿ ಸಚಿವರು, ಡಿಸಿ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.
ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಪಾಲನೆ ಸೇರಿದಂತೆ ಸರ್ಕಾರದ ನಿಯಮ ಪಾಲಿಸಬೇಕಿದೆ.
15 ದಿನಗಳಲ್ಲಿ ಕೊರೋನಾ ನಿಯಮತ್ರಣಕ್ಕೆ ಬಂದ್ರೆ ನಿರ್ಬಂಧ ಸಡಿಲಿಕೆ ಮಾಡಲಾಗುವುದು ಎಂದು ಹೇಳಲಾಗಿದೆ.