alex Certify BIG NEWS: ಇಂದಿನಿಂದ ಬಹುತೇಕ ನಿರ್ಬಂಧ ತೆರವು -ಸಿನಿಮಾ, ಶಾಲೆ ಹೊರತಾಗಿ ಎಲ್ಲ ಓಪನ್; ಇಲ್ಲಿದೆ ಡಿಟೇಲ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇಂದಿನಿಂದ ಬಹುತೇಕ ನಿರ್ಬಂಧ ತೆರವು -ಸಿನಿಮಾ, ಶಾಲೆ ಹೊರತಾಗಿ ಎಲ್ಲ ಓಪನ್; ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಅನ್ ಲಾಕ್ 3 ಇಂದಿನಿಂದ ಆರಂಭವಾಗಿದ್ದು, ಬಹುತೇಕ ಎಲ್ಲ ನಿರ್ಬಂಧ ತೆರವುಗೊಳಿಸಲಾಗಿದೆ. ಜುಲೈ 5 ರಿಂದ 19 ರ ವರೆಗೆ 15 ದಿನಗಳ ಕಾಲ ಅನೇಕ ನಿರ್ಬಂಧ ಸಡಿಲಿಕೆ ಮಾಡಲಾಗಿದೆ.

ಸರ್ಕಾರಿ, ಖಾಸಗಿ ಕಚೇರಿ, ಕೈಗಾರಿಕೆ, ವಾಣಿಜ್ಯ ಚಟುವಟಿಕೆ ಶೇಕಡ 100 ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಬಹುದು.

ಮಾಲ್ ತೆರೆಯಲು ಅವಕಾಶ

ಮೆಟ್ರೋ ಸೇರಿ ಸಾರ್ವಜನಿಕ ಸಾರಿಗೆ ಶೇಕಡ 100 ಪ್ರಯಾಣಿಕರೊಂದಿಗೆ ಕಾರ್ಯಾಚರಣೆ

ಧಾರ್ಮಿಕ ಸ್ಥಳಗಳಲ್ಲಿ ಭಕ್ತರ ದರ್ಶನಕ್ಕೆ ಅವಕಾಶ

ಮದುವೆ, ಕೌಟುಂಬಿಕ ಶುಭ ಕಾರ್ಯಕ್ರಮಗಳಲ್ಲಿ 100 ಜನರಿಗೆ ಅವಕಾಶ

ಈಜುಕೊಳಗಳಲ್ಲಿ ಕ್ರೀಡಾಪಟುಗಳ ಅಭ್ಯಾಸಕ್ಕೆ ಅವಕಾಶ

ಕ್ರೀಡಾ ಸಂಕೀರ್ಣಗಳಲ್ಲಿ ಕ್ರೀಡಾಪಟುಗಳ ಅಭ್ಯಾಸಕ್ಕೆ ಅವಕಾಶ

ಅಂತ್ಯಸಂಸ್ಕಾರಕ್ಕೆ 20 ಜನರಿಗೆ ಅವಕಾಶ ನೀಡಲಾಗಿದೆ.

 

ವೀಕೆಂಡ್ ಕರ್ಫ್ಯೂ ತೆರವು -ನೈಟ್ ಕರ್ಫ್ಯೂ ಜಾರಿ

ರಾತ್ರಿ 9 ರಿಂದ ಬೆಳಗ್ಗೆ 5 ಗಂಟೆವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ

ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿರುವುದಿಲ್ಲ.

 

ಸಿನಿಮಾ/ಪಬ್ ಗೆ ಅವಕಾಶ ಇಲ್ಲ -ನಿಯಮ ಪಾಲನೆ ಕಡ್ಡಾಯ

ಸಾಮಾಜಿಕ, ಧಾರ್ಮಿಕ ಸಭೆ ಸಮಾರಂಭ, ಪ್ರತಿಭಟನೆ ಇತರೆ ಸಮಾರಂಭಗಳಿಗೆ ಅವಕಾಶ ಇರುವುದಿಲ್ಲ

ಶೈಕ್ಷಣಿಕ ಸಂಸ್ಥೆಗಳು ತೆರೆಯುವ ಪ್ರತ್ಯೇಕ ತೀರ್ಮಾನ ಮಾಡಲಾಗುವುದು

ಪಬ್ ಗಳಿಗೆ ಅವಕಾಶ ಇಲ್ಲ, ಬಾರ್ ಗಳಿಗೆ ಅವಕಾಶ ನೀಡಲಾಗಿದೆ.

ಚಿತ್ರಮಂದಿರಗಳ ಕಾರ್ಯನಿರ್ವಹಣೆಗೆ ಅವಕಾಶ ಇಲ್ಲ

ಜಿಲ್ಲೆಯ ಪರಿಸ್ಥಿತಿಗೆ ಅನುಗುಣವಾಗಿ ಜಿಲ್ಲಾ ಉಸ್ತುವಾರಿ ಸಚಿವರು, ಡಿಸಿ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.

ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಪಾಲನೆ ಸೇರಿದಂತೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...