ಲಕ್ನೋ: ರಾಜ್ಯದಲ್ಲಿ ಮಹಿಳೆಯರಿಗೆ ಕಿರುಕುಳ ನೀಡುವಂತಹ ಅಪರಾಧವನ್ನು ಯಾರಾದರೂ ಮಾಡಿದರೆ, ‘ಯಮರಾಜ’ ಅವರಿಗಾಗಿ ಕಾಯುತ್ತಿರುತ್ತಾನೆ’ ( ‘Yamraj’ waiting for you ) ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾನುವಾರ ಹೇಳಿದ್ದಾರೆ.
ಅಂಬೇಡ್ಕರ್ ನಗರದಲ್ಲಿ ಬೈಕ್ ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ವಿದ್ಯಾರ್ಥಿನಿಯ ‘ದುಪಟ್ಟಾ’ ಎಳೆದ ಪರಿಣಾಮ ಬೈಸಿಕಲ್ ನಿಂದ ವಿದ್ಯಾರ್ಥಿನಿ ಕೆಳಗೆ ಬಿದ್ದಿದ್ದಾಳೆ. ಆಗ ಮತ್ತೊಬ್ಬ ಬೈಕ್ ನಲ್ಲಿ ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಸಾವನ್ನಪ್ಪಿದ್ದಾಳೆ. ಈ ಘಟನೆ ಕುರಿತು ಮಾತನಾಡಿದ ಯೋಗಿ ಆದಿತ್ಯನಾಥ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಈ ಘಟನೆ ಶುಕ್ರವಾರ ನಡೆದಿದ್ದು, ಮೂವರು ಆರೋಪಿಗಳನ್ನು ಶನಿವಾರ ರಾತ್ರಿ ಬಂಧಿಸಲಾಗಿದೆ. ಭಾನುವಾರ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುವಾಗ ಇಬ್ಬರು ಆರೋಪಿಗಳಿಗೆ ಗುಂಡು ತಗುಲಿದ್ದರೆ, ಒಬ್ಬನಿಗೆ ಕಾಲು ಮುರಿತವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಜಿಲ್ಲೆಯಲ್ಲಿ 343 ಕೋಟಿ ರೂ.ಗಳ 76 ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ನಂತರ ಮಾತನಾಡಿದ ಸಿಎಂ, ರಾಜ್ಯದಲ್ಲಿ ಮಹಿಳೆಯರಿಗೆ ಕಿರುಕುಳ ನೀಡುವಂತಹ ಅಪರಾಧವನ್ನು ಯಾರಾದರೂ ಮಾಡಿದರೆ, ಸಾವಿನ ದೇವತೆ ‘ಯಮರಾಜ’ ಅವರಿಗಾಗಿ ಕಾಯುತ್ತಿರುತ್ತಾನೆ ಎಂದು ಹೇಳಿದರು.
ಕಾನೂನು ಮತ್ತು ಸುವ್ಯವಸ್ಥೆಯನ್ನು ರಕ್ಷಿಸಲು ಬಲವಾದ ಕಾನೂನು ವ್ಯವಸ್ಥೆಯ ಮಹತ್ವವನ್ನು ಆದಿತ್ಯನಾಥ್ ಎತ್ತಿ ತೋರಿಸಿದರು ಮತ್ತು ವ್ಯವಸ್ಥೆಯನ್ನು ಅಡ್ಡಿಪಡಿಸಲು ಕಾನೂನನ್ನು ದುರುಪಯೋಗಪಡಿಸಿಕೊಳ್ಳಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಒತ್ತಿ ಹೇಳಿದರು.
ಉತ್ತರ ಪ್ರದೇಶದ ಆಡಳಿತಾರೂಢ ಬಿಜೆಪಿ ಆದಿತ್ಯನಾಥ್ ಸರ್ಕಾರವು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ನಿರ್ವಹಿಸಿದ ರೀತಿಯನ್ನು ತನ್ನ ಸಾಧನೆಗಳಲ್ಲಿ ಒಂದಾಗಿದೆ ಎಂದು ಆಗಾಗ್ಗೆ ಹೇಳಿಕೊಳ್ಳುತ್ತದೆ.