ಬೆಂಗಳೂರು : ಡಿಪ್ಲೋಮಾ, ಪದವೀಧರರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, 2024 ರ ಜನವರಿಯಲ್ಲಿ `ಯುವನಿಧಿ’ ಯೋಜನೆ ಜಾರಿಗೆ ತರಲಾಗುವುದು ಎಂದು ಘೋಷಣೆ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರವು ಕೊಟ್ಟ ಭರವಸೆಯಂತೆ ಈಗಾಗಲೇ ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಮುಂದಿನ ವರ್ಷದ ಜನವರಿಯಲ್ಲಿ ಡಿಪ್ಲೋಮಾ, ಪದವೀಧರರಿಗೆ ನಿರುದ್ಯೋಗ ಭತ್ಯೆ ನೀಡುವ ಯುವನಿಧಿ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ತಿಳಿಸಿದ್ದಾರೆ.
2022- 23ನೇ ಸಾಲಿನಲ್ಲಿ ಉತ್ತೀರ್ಣರಾಗಿ 6 ತಿಂಗಳು ಉದ್ಯೋಗ ಸಿಗದ, ವೃತ್ತಿಪರ ಕೋರ್ಸ್ ಒಳಗೊಂಡು ಎಲ್ಲ ಪದವೀಧರರಿಗೆ ಪ್ರತಿ ತಿಂಗಳು 3,000 ರೂ ಡಿಪ್ಲೊಮಾ ಪದವೀಧರರಿಗೆ ಮಾಸಿಕ 1,500 ರೂಪಾಯಿ ನಿರುದ್ಯೋಗ ಭತ್ಯೆ ಸಿಗಲಿದೆ. ಈ ಭತ್ಯೆಯು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳ ಅವಧಿಗೆ ಸಿಗಲಿದೆ.