alex Certify ಗಾಣಿಗ ಸಮಾಜದವರಿಗೆ ಸಿಎಂ ಗುಡ್ ನ್ಯೂಸ್ : ಶೀಘ್ರವೇ ʻಗಾಣಿಗರ ಅಭಿವೃದ್ಧಿʼ ನಿಗಮ ಸ್ಥಾಪನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಾಣಿಗ ಸಮಾಜದವರಿಗೆ ಸಿಎಂ ಗುಡ್ ನ್ಯೂಸ್ : ಶೀಘ್ರವೇ ʻಗಾಣಿಗರ ಅಭಿವೃದ್ಧಿʼ ನಿಗಮ ಸ್ಥಾಪನೆ

ಬೆಂಗಳೂರು : ಗಾಣಿಗ ಸಮಾಜದವರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಗಾಣಿಗ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಲಾಗುವುದು ಎಂದು ಘೋಷಿಸಿದ್ದಾರೆ.

ಅಖಿಲ ಕರ್ನಾಟಕ ಗಾಣಿಗರ ಸಂಘದಿಂದ ಆಲಹಳ್ಳಿ ಅಂಜನಾಪುರದಲ್ಲಿ ಆಯೋಜಿಸಲಾಗಿದ್ದ ಸುವರ್ಣ ಮಹೋತ್ಸವ ಸಮಾರಂಭ, ಗಾಣಿಗ ಜನಾಂಗದ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಮಾಜದಲ್ಲಿ ಅವಕಾಶ ವಂಚಿತ ಜನರಿಗೆ, ಶತಶತಮಾನಗಳಿಂದ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿರುವವರು, ಸಾಮಾಜಿಕ  ನ್ಯಾಯದಿಂದ ಇಂದಿಗೂ ವಂಚಿತರಾದ ಜನರ ಪರವಾಗಿ ನಾವು ಇರುತ್ತೇವೆ. ಯಾರೂ ಏನೇ ಹೇಳಿದರೂ ಸಾಮಾಜಿಕ ನ್ಯಾಯದಲ್ಲಿ ರಾಜಿ ಇಲ್ಲದೆ ಕೆಲಸ ಮಾಡುತ್ತೇವೆ ಎಂದರು.

ಗಾಣಿಗ ಸಮಾಜದವರು ಎಣ್ಣೆ ಉತ್ಪಾದನೆಯ ವೃತ್ತಿ ಮಾಡುತ್ತಿದ್ದವರು. ಇತ್ತೀಚಿನ ವರ್ಷಗಳಲ್ಲಿ ಕೈಗಾರೀಕರಣವಾದ ನಂತರ, ಎಣ್ಣೆ ತಯಾರಿಸುವ ವೃತ್ತಿಯನ್ನು ಬಿಡಬೇಕಾದ ಪರಿಸ್ಥಿತಿ ಬಂದಿದೆ. ಅನೇಕರು ಇದರಿಂದ ನಿರುದ್ಯೋಗಿಗಳಾಗಿದ್ದಾರೆ. ಈ ಸಮಾಜದಲ್ಲಿ ಜಮೀನು ಹೊಂದಿದವರು ಬಹಳ ಕಡಿಮೆ, ಸಣ್ಣ ರೈತರು ಬಹಳ ಕಡಿಮೆ ಇದ್ದಾರೆ ಎಂದು ಹೇಳಿದ್ದಾರೆ.

ಗಾಣಿಗರ ನಿಗಮ ಸ್ಥಾಪನೆ, ವಿಶ್ವಕರ್ಮ ಯೋಜನೆಯಡಿ ಗಾಣಿಗರನ್ನು ಬಿಟ್ಟಿದ್ದರ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ಸಮುದಾಯದ ಮುಖಂಡರು ಈಗ ನನ್ನಲ್ಲಿ ಮನವಿ ಮಾಡಿದ್ದಾರೆ. ನಿಮ್ಮ ಸಮಾಜಕ್ಕೆ ಸೇರಿದ ಪ್ರಧಾನಿಗಳಿಗೆ ನಿಮ್ಮ ಸಮಸ್ಯೆ ಗೊತ್ತಿದೆಯೋ? ಇಲ್ಲವೋ? ನನಗೆ ತಿಳಿದಿಲ್ಲ ಆದರೆ ನಾನು ಕೂಡಲೇ ಪತ್ರ ಬರೆಯುತ್ತೇನೆ ಎಂದರು.

ಸಾಮಾಜಿಕ ಆರ್ಥಿಕ, ಶೈಕ್ಷಣಿಕ ಜಾತಿ ಗಣತಿ ವರದಿಯನ್ನು ವೈಜ್ಞಾನಿಕವಾಗಿ ಸಿದ್ಧ ಮಾಡಿದ್ದು, ವರದಿಯನ್ನು ಇನ್ನೂ  ನಾವು ಸ್ವೀಕಾರ ಮಾಡಿಲ್ಲ. ವರದಿಯನ್ನು ಸ್ವೀಕರಿಸಲೆಂದೇ ಆಯೋಗದ ಅವಧಿಯನ್ನು 2 ತಿಂಗಳು ಮುಂದುವರೆಸಲಾಗಿದೆ. ವರದಿ ಬಂದ ಮೇಲೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ರಾಜಶೇಖರ್ ಅವರಿಗೆ ಸಹಕಾರ ರತ್ನ ಎಂಬ ಬಿರುದು, ಲಕ್ಷ್ಮೀ ಪತಿ ಎನ್ನುವವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ. ರಾಧಾಕೃಷ್ಣ ಏಂಬುವವರಿಗೆ ರಾಜ್ಯ ರೈತ ಪ್ರಶಸ್ತಿ ನೀಡಿದೆ. ಸಮಾಜಿಕ ಕೆಲಸ ಮಾಡಿದವರನ್ನು ಗುರುತಿಸುವ ಕೆಲಸ ನಮ್ಮ ಸರ್ಕಾರ ಮಾಡಿದೆ. ಹೀಗೆಯೇ ಅದನ್ನು ನಾವು ಮುಂದುವರೆಸುತ್ತೇವೆ ಎಂದು ಹೇಳಿದ್ದಾರೆ.

ವಿ.ಆರ್.ಸುದರ್ಶನ್ ಮತ್ತು ನಾನು ರಾಜಕೀಯ, ಹೋರಾಟ, ಸಾಮಾಜಿಕವಾಗಿ ಒಟ್ಟಿಗೆ ಇದ್ದವರು. ಅವರ ಹಾಗೂ ನಮ್ಮ ಮನಸ್ಥಿತಿ ಒಂದೇ ಇದೆ. ರೂಢಾನಂದಪುರಿ ಅವರು ಸ್ವಾಮೀಜಿಗಳಾದ ಮೇಲೆ ಇದೇ ಮೊದಲ ಬಾರಿಗೆ ವೇದಿಕೆ ಹಂಚಿಕೊಳ್ಳುತ್ತಿದ್ದೇನೆ. ನಾವು ಒಟ್ಟಿಗೆ ಹಿಂದುಳಿದ ಜಾತಿಗಳ ಸಮಸ್ಯೆ ಕುರಿತು ಚರ್ಚೆ ಮಾಡಿ, ಇತ್ಯರ್ಥ ಮಾಡಲು ಪ್ರಯತ್ನಿಸಿದವರು. ಅವರಲ್ಲಿ ಈ ಸಮಾಜವನ್ನು ಮುನ್ನಡೆಸುವ ಶಕ್ತಿ ಹೆಚ್ಚಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...