![](https://kannadadunia.com/wp-content/uploads/2019/01/cm-ex-siddu-sign.jpg)
ಬೆಂಗಳೂರು : ಕೆಎಸ್ ಆರ್ ಟಿಸಿ ಬಸ್ ಪ್ರಯಾಣಿಕರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಪ್ರಯಾಣಿಕರ ಅನುಕೂಲಕ್ಕಾಗಿ 971 ಬಸ್ಸಗಳನ್ನು ಖರೀದಿಸಲು ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಶಕ್ತಿ ಯೋಜನೆ ಅಭೂತಪೂರ್ವ ಯಶಸ್ವಿಯಾದರೂ, ಕೆಲವೆಡೆ ಬಸ್ ಕೊರತೆಯಿಂದ ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ. ಈಗಾಗಲೇ 971 ಬಸ್ಸಗಳನ್ನು ಖರೀದಿಸಲು ಅನುಮತಿ ನೀಡಲಾಗಿದೆ. ಅಗತ್ಯವಿರುವೆಡೆ ಹೆಚ್ಚು ಬಸ್ ಗಳನ್ನು ಹಾಕಲು ತಿಳಿಸಲಾಗಿದೆ.
ಇನ್ನು ಜನಸ್ಪಂದನ ಕಾರ್ಯಕ್ರಮಕ್ಕೆ ಸುಮಾರು ನಾಲ್ಕೈದು ಸಾವಿರ ಜನರು ತಮ್ಮ ಅಹವಾಲುಗಳೊಂದಿಗೆ ಆಗಮಿಸಿದ್ದಾರೆ, ಜನರು ನಮ್ಮ ಸರ್ಕಾರದ ಮೇಲಿಟ್ಟಿರುವ ವಿಶ್ವಾಸವನ್ನು ಉಳಿಸುವ ಪ್ರಯತ್ನ ಮಾಡಲಾಗಿದೆ.
ಜನರ ಸಮಸ್ಯೆಗೆ ಪರಿಹಾರ ಒದಗಿಸುವ ಜನಸ್ಪಂದನೆ ಕಾರ್ಯಕ್ರಮಕ್ಕೆ ನಿರೀಕ್ಷೆಗೂ ಮೀರಿ ಜನರು ಆಗಮಿಸಿದ್ದರು. ಸುಮಾರು 3500 ಮನವಿಗಳು ಸ್ವೀಕೃತವಾಗಿದೆ. ನಾನು ಬೆಳಿಗ್ಗೆಯಿಂದಲೇ ಜನರ ಬಳಿಗೆ ತೆರಳಿ ಅವರ ಕುಂದುಕೊರತೆಗಳನ್ನು ಖುದ್ದು ಆಲಿಸಿದ್ದೇನೆ. ಸ್ವೀಕೃತವಾಗಿರುವ ಎಲ್ಲ ಅರ್ಜಿಗಳ ಬಗ್ಗೆ ಕಾನೂನು ರೀತ್ಯ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.