ಮೈಸೂರು : ರಾಜ್ಯದ ರೈತರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ರೈತರಿಗೆ ವಾರದೊಳಗೆ ಬರ ಪರಿಹಾರದ ಮೊದಲ ಕಂತನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತಾಡಿದ ಅವರು, ರಾಜ್ಯ ಸರ್ಕಾರವು ಈಗಾಗಲೇ 550 ಕೋಟಿ ರೂ.ಗಳನ್ನು ರೈತರಿಗೆ ಪರಿಹಾರವಾಗಿ ಬಿಡುಗಡೆ ಮಾಡಿದ್ದೇವೆ. ಇನ್ನೊಂದು ವಾರದೊಳಗೆ ಎಲ್ಲಾ ರೈತರಿಗೂ ಮೊದಲನೇ ಕಂತು ತಲಪಿಸುವ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದ್ದಾರೆ.
ರಾಜ್ಯದ ರೈತರು ಬರಗಾಲದಿಂದ ತೊಂದರೆ ಅನುಭವಿಸುತ್ತಿದ್ದಾರೆ. ಕೂಡಲೇ ಹಣ ಬಿಡಗುಡೆ ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೂ ಮನವಿ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.