ಬೆಂಗಳೂರು : ರಾಜ್ಯದ ಗುತ್ತಿಗೆದಾರರಿಗೆ ನೀಡಬೇಕಾದ ಬಾಕಿ ಹಣವನ್ನು ಹಂತ ಹಂತವಾಗಿ ಬಿಡುಗಡೆ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಅರಮನೆ ಮೈದಾನದಲ್ಲಿ ನಡೆದ ಗುತ್ತಿಗೆದಾರರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಸಣ್ಣ ಗುತ್ತಿಗೆದಾರರ ಅನುಕೂಲಕ್ಕಾಗಿ 4 ಸಾವಿರ ಕೋಟಿ ರೂಪಾಯಿಯ ಕಾಮಗಾರಿಯನ್ನು ಪ್ಯಾಕೇಜ್ ಇಲ್ಲದೆ ನೀಡಲು ಲೋಕೋಪಯೋಗಿ ಸಚಿವರಿಗೆ ಸೂಚಿಸಿದ್ದೇನೆ. ಬಾಕಿ ಹಣವನ್ನು ಹಂತ ಹಂತವಾಗಿ ಬಿಡುಗಡೆ ಮಾಡಲಾಗುತ್ತದೆ ಎಂದರು. ಇವತ್ತಿನವರೆಗೂ ಕೇಂದ್ರ ಒಂದೇ ಒಂದು ರೂಪಾಯಿ ಕೊಟ್ಟಿಲ್ಲ. ಕೇಂದ್ರ ಸರ್ಕಾರ ಎಷ್ಟೇ ಅಸಹಕಾರ ಕೊಟ್ಟರೂ ಗುತ್ತಿಗೆದಾರರ ಅಷ್ಟೂ ಹಣವನ್ನು ನಾವೇ ಹಂತ ಹಂತವಾಗಿ ಪಾವತಿಸುತ್ತೇವೆ ಎಂದರು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಸತೀಶ್ ಜಾರಕಿಹೊಳಿ, ಬೋಸ್ ರಾಜು, ಜಮೀರ್ ಅಹಮದ್ ಖಾನ್ ಸೇರಿ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.