asಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ಸಭೆಯೊಂದರಲ್ಲಿ ರಾಷ್ಟ್ರ ಸಂಪತ್ತಿನಲ್ಲಿ ಅಲ್ಪ ಸಂಖ್ಯಾತರಿಗೆ ವಿಶೇಷವಾಗಿರುವ ಹಕ್ಕು ಕೊಡುವ ಮಾತನಾಡಿದ್ದಾರೆ.
ಇದು ತುಷ್ಟೀಕರಣದ ರಾಜಕಾರಣ, ಮತ ಬ್ಯಾಂಕಿನ ರಾಜಕಾರಣ ಮತ್ತು ಮುಖ್ಯಮಂತ್ರಿ ಯಾಗಿ ಎಲ್ಲರಿಗೂ ನ್ಯಾಯ ಕೊಡುವ ಅವರ ಕರ್ತವ್ಯವನ್ನು ಮರೆತಂತಿದೆ ಎಂದು ಮಾಜಿ ಸಿಎಂ ಬೊಮ್ಮಾಯಿ ವಾಗ್ಧಾಳಿ ನಡೆಸಿದ್ದಾರೆ.
ಈಗಾಗಲೇ ಅಲ್ಪಸಂಖ್ಯಾತರಿಗೆ ವಕ್ಪ್ ಬೊರ್ಡ್ ಮೈನಾರಿಟಿ ಕಾರ್ಪೊರೆಷನ್, ಮೈನಾರಿಟಿ ಕಮಿಷನ್ ನಿಂದ ಹಲವಾರು ಕಾರ್ಯಕ್ರಮಗಳ ಮೂಲಕ ಅನುದಾನ ಬರುತ್ತಿದೆ ಅವರೂ ಕೂಡ ಶಿಕ್ಷಣವನ್ನು ಪಡೆದು ಸ್ವಾವಲಂಬಿ ಆಗಬೇಕೆಂಬ ಆಸೆ ಎಲ್ಲ ಸರ್ಕಾರಗಳ ಉದ್ದೇಶ. ಆದರೆ, ಇತರ ಎಲ್ಲ ಸಮುದಾಯಗಳ ಮೇಲೆ ಸವಾರಿ ಮಾಡುವ ರೀತಿ ಮುಖ್ಯಮಂತ್ರಿಯ ಮಾತು ಖಂಡನೀಯ ಎಂದಿದ್ದಾರೆ.