alex Certify ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ. ಮಂಜುನಾಥ್ ಸೇವಾವಧಿ ಮುಕ್ತಾಯ: ನಾಳೆ ಸಿಎಂ ಸಭೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ. ಮಂಜುನಾಥ್ ಸೇವಾವಧಿ ಮುಕ್ತಾಯ: ನಾಳೆ ಸಿಎಂ ಸಭೆ

ಬೆಂಗಳೂರು: ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅವರ ಸೇವಾವಧಿ ಜುಲೈ 19 ರಂದು ಮುಕ್ತಾಯವಾಗಲಿದೆ.

ಈ ಹಿನ್ನೆಲೆಯಲ್ಲಿ ಸೋಮವಾರ ಮುಖ್ಯಮಂತ್ರಿ ಮತ್ತು ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಸಲಾಗುವುದು. 2007 ರಿಂದ ಸತತ 16 ವರ್ಷಗಳ ಕಾಲ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾಗಿ ಡಾ.ಸಿ.ಎನ್. ಮಂಜುನಾಥ್ ಕಾರ್ಯನಿರ್ವಹಿಸುತ್ತಿದ್ದು, ಅವರ ಸೇವಾ ಅವಧಿಯಲ್ಲಿ ಆಸ್ಪತ್ರೆ ನೀಡುವ ಸೇವೆ ಮತ್ತು ಸೌಲಭ್ಯದಲ್ಲಿ ವಿಶ್ವ ಮಾನ್ಯತೆ ಪಡೆದುಕೊಂಡಿದೆ. ಮೈಸೂರು ಸೇರಿದಂತೆ ರಾಜ್ಯದ ವಿವಿಧೆಡೆ ಜಯದೇವ ಆಸ್ಪತ್ರೆಯ ಶಾಖೆಗಳನ್ನು ತೆರೆಯಲಾಗಿದೆ.

ಕಳೆದ ವರ್ಷವೇ ಅವರ ಸೇವಾ ಅವಧಿ ಮುಕ್ತಾಯವಾಗಿದ್ದು, ಆಸ್ಪತ್ರೆಯ ಸಿಬ್ಬಂದಿ ರೋಗಿಗಳು ಹಾಗೂ ಸಾರ್ವಜನಿಕರ ಒತ್ತಾಯದ ಮೇರೆಗೆ ಸರ್ಕಾರ ಒಂದು ವರ್ಷ ಸೇವೆಯನ್ನು ಮುಂದುವರೆಸಿತ್ತು. ಬುಧವಾರ ಮಂಜುನಾಥ್ ಅವರ ಸೇವಾವಧಿ ಮುಕ್ತಾಯವಾಗಲಿದ್ದು, ಜನರ ಒತ್ತಾಯದ ಹಿನ್ನೆಲೆಯಲ್ಲಿ ಅವರ ಸೇವಾ ಅವಧಿಯನ್ನು ವಿಸ್ತರಿಸುವ ಕುರಿತು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...