
ಬೆಂಗಳೂರು: ಸಹಕಾರಿ ಸಂಸ್ಥೆಗಳಲ್ಲಿ 5 ಸಾವಿರ ಜನರಿಗೆ ಉದ್ಯೋಗಾವಕಾಶ ಕಲ್ಪಿಸಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ.
ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಡಿಸಿಸಿ ಬ್ಯಾಂಕ್ ವತಿಯಿಂದ ಹಮ್ಮಿಕೊಂಡಿದ್ದ ಸಾಲ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು, 5 ಸಾವಿರ ಜನರಿಗೆ ಹಾಲು ಒಕ್ಕೂಟ ಸೇರಿದಂತೆ ಸಹಕಾರ ಇಲಾಖೆಯ ಅಂಗ ಸಂಸ್ಥೆಗಳಿಂದ ಉದ್ಯೋಗ ಅವಕಾಶ ಕಲ್ಪಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಕೊರೋನಾ ಸಂದರ್ಭದಲ್ಲಿ 5000 ಉದ್ಯೋಗ ಸೃಷ್ಟಿ ಮಾಡುವಂತೆ ಆದೇಶ ನೀಡಲಾಗಿದ್ದು, ಬೆಂಗಳೂರು ಹಾಲು ಒಕ್ಕೂಟದಿಂದ 279 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅದೇ ರೀತಿ ಅನೇಕ ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗುವುದು ಎಂದು ಹೇಳಿದ್ದಾರೆ.