ಬಿಜೆಪಿ ವಿರೋಧ ಹಿನ್ನೆಲೆ ಸಹಕಾರ ಸಂಘಗಳ ವಿಧೇಯಕ ಪರಿಶೀಲನಾ ಸಮಿತಿಗೆ ವರ್ಗ

ಬೆಂಗಳೂರು: ಕರ್ನಾಟಕ ಸಹಕಾರ ಸಂಘಗಳ ತಿದ್ದುಪಡಿ ವಿಧೇಯಕ 2024ಕ್ಕೆ ವಿರೋಧ ಪಕ್ಷಗಳ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದರಿಂದ ಪರಿಶೀಲನಾ ಸಮಿತಿಗೆ ವಹಿಸಲು ವಿಧಾನ ಪರಿಷತ್ ನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಕರ್ನಾಟಕ ಸಹಕಾರ ತಿದ್ದುಪಡಿ ವಿಧೇಯಕ ಮಂಡನೆಗೆ ಮುಂದಾದರು. ಪಾಕಿಸ್ತಾನ ಜಿಂದಾಬಾದ್ ಘೋಷಣೆ ಹಿನ್ನೆಲೆಯಲ್ಲಿ ಕ್ರಮಕ್ಕೆ ಒತ್ತಾಯಿಸಿ ಸದನದ ಬಾವಿಗಿಳಿದು ನಡೆಸುತ್ತಿದ್ದ ಧರಣಿಯನ್ನು ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹಿಂಪಡೆದರು.

ತಳ ಸಮುದಾಯದವರಿಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ಸಹಕಾರ ಸಂಘಗಳ ಮಂಡಳಿಗೆ ಮೂವರನ್ನು ನಾಮನಿರ್ದೇಶನ ಮಾಡಬಹುದು ಎಂದು ವಿಧೇಕ ಮಂಡಿಸಿದ ಬಗ್ಗೆ ಸಚಿವ ರಾಜಣ್ಣ ತಿಳಿಸಿದ್ದಾರೆ. ಇದಕ್ಕೆ ಆಕ್ಷೇಪಿಸಿದ ಕೋಟ ಶ್ರೀನಿವಾಸ ಪೂಜಾರಿ, ಸಹಕಾರ ಸಂಘಗಳ ಚುನಾವಣೆ ನಡೆಸಲು ಚುನಾವಣಾ ಪ್ರಾಧಿಕಾರ ರದ್ದುಗೊಳಿಸಿ ನಿಬಂಧಕರ ಮಟ್ಟದಲ್ಲಿ ಚುನಾವಣೆ ನಡೆಸುವುದು ಪಾರದರ್ಶಕತೆ ತರಲು ಹೇಗೆ ಸಾಧ್ಯ. ಹೀಗಾಗಿ ತಿದ್ದುಪಡಿ ಕಾಯ್ದೆಯನ್ನು ಪರಿಶೀಲನಾ ಸಮಿತಿಗೆ ಒಪ್ಪಿಸಬೇಕೆಂದು ಆಗ್ರಹಿಸಿದರು. ಇದಕ್ಕೆ ಸಚಿವ ರಾಜಣ್ಣ ಒಪ್ಪಿಕೊಂಡಿದ್ದು, ಪರಿಶೀಲನಾ ಸಮಿತಿಗೆ ಒಪ್ಪಿಸಲು ನಿರ್ಣಯ ಕೈಗೊಳ್ಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read