ರಾಯ್ ಪುರ: ಕಲ್ಲಿದ್ದಲು ಲೆವಿ ಹಗರಣಕ್ಕೆ ಸಂಬಂಧಿಸಿದಂತೆ ಛತ್ತೀಸ್‌ಗಢ ಸಿಎಂಒ ಉಪ ಕಾರ್ಯದರ್ಶಿ ಸೌಮ್ಯ ಚೌರಾಸಿಯಾ ಅವರನ್ನು ಇಡಿ ಬಂಧಿಸಿದೆ.
ಕಳೆದೆರಡು ವರ್ಷಗಳಿಂದ ಕೇಂದ್ರ ಏಜೆನ್ಸಿಯು ತನಿಖೆ ನಡೆಸುತ್ತಿರುವ ಅಕ್ರಮ ಕಲ್ಲಿದ್ದಲು ಲೆವಿ ಹಗರಣಕ್ಕೆ ಸಂಬಂಧಿಸಿದಂತೆ ಛತ್ತೀಸ್‌ಗಢ ಮುಖ್ಯಮಂತ್ರಿ ಕಚೇರಿ ಪ್ರಮುಖ ಉಪ ಕಾರ್ಯದರ್ಶಿ ಸೌಮ್ಯ ಚೌರಾಸಿಯಾ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಶುಕ್ರವಾರ ಬಂಧಿಸಿದೆ.
2008 ರ ಬ್ಯಾಚ್‌ನ ರಾಜ್ಯ ಆಡಳಿತ ಸೇವಾ ಅಧಿಕಾರಿ ಸೌಮ್ಯಾ ಅವರು ಡಿಸೆಂಬರ್ 2008 ರಲ್ಲಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಸಿಎಂಒದಲ್ಲಿ ಉಪ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.
ಅಕ್ರಮ ಕಲ್ಲಿದ್ದಲು ಲೆವಿ ಹಗರಣದ ಕಿಂಗ್‌ಪಿನ್ ಎಂದು ಇಡಿ ಬಣ್ಣಿಸಿರುವ ಸೂರ್ಯಕಾಂತ್ ತಿವಾರಿ ಸೇರಿದಂತೆ 2009 ರ ಬ್ಯಾಚ್‌ನ ಐಎಎಸ್ ಅಧಿಕಾರಿ ಸಮೀರ್ ವಿಷ್ಣೋಯ್, ಮೂವರು ಉದ್ಯಮಿಗಳನ್ನು ಇಡಿ ಈಗಾಗಲೇ ಬಂಧಿಸಿದೆ.