ವಿದ್ಯುತ್ ಉತ್ಪಾದನೆಗೆ ಕಲ್ಲಿದ್ದಲು ಕೊರತೆ ಪ್ರಶ್ನೆ ಇಲ್ಲ ಎಂದು ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ ಭರವಸೆ ನೀಡಿದ್ದಾರೆ.
2 ಮಿಲಿಯನ್ ಟನ್ ಕಲ್ಲಿದ್ದಲು ಸರಬರಾಜು ಮಾಡುವಂತೆ ಇಂಧನ ಇಲಾಖೆ ಬೇಡಿಕೆ ಸಲ್ಲಿಸಿದ್ದು, ಅವರ ಬೇಡಿಕೆಯಂತೆ 2 ಮಿಲಿಯನ್ ಟನ್ ಕಲ್ಲಿದ್ದಲು ಪೂರೈಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಇಂಧನ ಇಲಾಖೆಯ ಬೇಡಿಕೆಯಂತೆ ಕಲ್ಲಿದ್ದಲು ಪೂರೈಸಲಾಗಿದೆ. ಈ ಮೊದಲು 1.9 ಮಿಲಿಯನ್ ಟನ್ ಬೇಡಿಕೆಯಿದ್ದು ಈಗ 2 ಮಿಲಿಯನ್ ಕೇಳಲಾಗಿತ್ತು. ಬೇಡಿಯಷ್ಟು ಪೂರೈಕೆ ಮಾಡಲಾಗಿದೆ. ವಿದ್ಯುತ್ ಉತ್ಪಾದನೆಗೆ ಕಲ್ಲಿದ್ದಲು ಕೊರತೆಯಾಗುವುದಿಲ್ಲ ಎಂದು ತಿಳಿಸಿದ್ದಾರೆ.