
ಬೆಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ಜಿಲ್ಲೆಗಳಲ್ಲಿ ಜೂನ್ 21 ರಿಂದ 25ರವರೆಗೆ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ರಾಜ್ಯದ ಹಲವೆಡೆ ಮಳೆ ಆರ್ಭಟ ಮುಂದುವರೆದಿದ್ದು, ಇನ್ನೂ ನಾಲ್ಕು ದಿನಗಳ ಕಾಲ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಧರ್ಮಸ್ಥಳದಲ್ಲಿ 110 ಮಿಮೀ ಮಳೆಯಾಗಿದೆ. ಜೂನ್ 21 ರಂದು ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರ ಜಿಲ್ಲೆಗಳ ವ್ಯಾಪ್ತಿಯಲ್ಲಿ ಹೆಚ್ಚಿನ ಮಳೆಯಾಗಲಿದೆ.
ಜೂನ್ 22 ರಂದು ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ಜೂನ್ 24ರಿಂದ ಕರಾವಳಿ ಪ್ರದೇಶ, ದಕ್ಷಿಣ ಒಳನಾಡು, ಮಲೆನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.