ಬೆಂಗಳೂರು: ರಾಜ್ಯದ 9 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 8 ರಿಂದ 12 ರವರೆಗೆ ಗುಡುಗು-ಸಿಡಿಲಿನ ಸಹಿತ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಸೇರಿದಂತೆ ಚಿತ್ರದುರ್ಗ, ಬಳ್ಳಾರಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಅಕ್ಟೋಬರ್ 8 ರಂದು ಧಾರಕಾರ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಪ್ರದೇಶದಲ್ಲಿ ಗಂಟೆಗೆ 50 ಕಿ.ಮೀ. ವೇಗದ ಗಾಳಿ ಬೀಸಲಿದೆ ಎಂದು ಹೇಳಲಾಗಿದೆ.