ಮಂಗಳೂರು: ಪಕ್ಷದಲ್ಲಿ ಒಳ ಜಗಳವಿಲ್ಲ, ಆದರೆ ಭಿನ್ನಾಭಿಪ್ರಾಯವಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ಕರಾವಳಿ ಕರ್ನಾಟಕಕ್ಕೆ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡುತ್ತೇವೆ. ಪ್ರಣಾಳಿಕೆ ಬಗ್ಗೆ ಸಂಘ-ಸಂಸ್ಥೆಗಳಿಂದ ಅಭಿಪ್ರಾಯ ಸಂಗ್ರಹಿಸಿದ್ದೇವೆ, ಕರಾವಳಿ ಭಾಗದ ಸಮಸ್ಯೆಗಳ ಬಗ್ಗೆ ಅಭಿಪ್ರಾಯ ಸಂಗ್ರಹಿಸಿದ್ದೇವೆ ಎಂದರು.
ಬಿಜೆಪಿ ಕರಾವಳಿ ಜಿಲ್ಲೆಗಳಲ್ಲಿ ಸಾಮರಸ್ಯ ಹಾಳು ಮಾಡಿದೆ. ಕೋಮು ಸೌಹಾರ್ದತೆ ವಿಚಾರ ಕೂಡ ನಮ್ಮ ಪ್ರಣಾಳಿಕೆಯಲ್ಲಿದೆ. ವಿದ್ಯಾರ್ಥಿ ವೇತನವನ್ನು ಬಿಜೆಪಿ ಸರ್ಕಾರ ನಿಲ್ಲಿಸಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.