ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು, ಕರಾವಳಿ ಪ್ರದೇಶದಲ್ಲಿ ಮಾರ್ಚ್ 21ರಿಂದ ಮೂರು ದಿನಗಳ ಕಾಲ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಕೊಪ್ಪಳ, ಬಾಗಲಕೋಟೆ ಜಿಲ್ಲೆಗಳಲ್ಲಿ ಸಾಮಾನ್ಯಕ್ಕಿಂತ ಎರಡರಿಂದ ಮೂರು ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ಹೆಚ್ಚಳವಾಗುವ ಸಂಭವವಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲಿ ಗರಿಷ್ಠ ಉಷ್ಣಾಂಶ ಸಾಮಾನ್ಯಕಿಂತ ಹೆಚ್ಚಾಗಲಿದೆ. ಕರಾವಳಿ ಭಾಗದ ಎಲ್ಲಾ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಮಾರ್ಚ್ 21ರಿಂದ ಮೂರು ದಿನ ಮಲೆನಾಡು, ದಕ್ಷಿಣ ಒಳನಾಡು, ಕರಾವಳಿ ಭಾಗದ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆ ಆಗುವ ಸಂಭವವಿದೆ ಎಂದು ಹೇಳಲಾಗಿದೆ.