ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದಿನಿಂದ 5 ದಿನಗಳ ಕಾಲ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಗಾಳಿಯ ಒತ್ತಡ ಕಡಿಮೆ ಆಗಿರುವ ಪರಿಣಾಮ ತೇವಾಂಶಭರಿತ ಮೋಡಗಳು ಸೃಷ್ಟಿಯಾಗಲಿವೆ. ಈ ಕಾರಣದಿಂದ ಕರಾವಳಿಯ ಉಡುಪಿ, ಉತ್ತರಕನ್ನಡ, ದಕ್ಷಿಣಕನ್ನಡ ಮತ್ತು ಮಲೆನಾಡು ಭಾಗದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗಲಿದೆ.ಏಪ್ರಿಲ್ 9 ರಿಂದ 13 ರವರೆಗೆ ಗುಡುಗು-ಮಿಂಚು ಸಹಿತ ಮಳೆಯಾಗಲಿದೆ.
ಚಾಮರಾಜನಗರ, ರಾಮನಗರ, ಮೈಸೂರು ಭಾಗದಲ್ಲಿ 4 ದಿನ ಮತ್ತು ಬೆಳಗಾವಿ, ಧಾರವಾಡ, ಕಲ್ಬುರ್ಗಿಯಲ್ಲಿ ಏಪ್ರಿಲ್ 9 ರಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.