ಬೆಂಗಳೂರು: ಕರಾವಳಿ ಪ್ರದೇಶದಲ್ಲಿ ಇನ್ನೂ 5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕಳೆದ ಎರಡು ಮೂರು ದಿನಗಳಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಹೆಚ್ಚಿನ ಮಳೆಯಾಗುತ್ತಿದೆ. ರಾಜ್ಯದ 22 ಭಾಗದಲ್ಲಿ ಭಾರಿ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ ಜಿಲ್ಲೆಯ ಕೊಲ್ಲೂರಿನಲ್ಲಿ ನಿನ್ನೆ 21 ಸೆಂಟಿ ಮೀಟರ್ ಮಳೆಯಾಗಿದೆ. ಮಹಾರಾಷ್ಟ್ರದ ದಕ್ಷಿಣ ಕರಾವಳಿಯಿಂದ ಗಾಳಿ ಬೀಸುತ್ತಿದ್ದು, ಕೇರಳ ರಾಜ್ಯದ ಉತ್ತರ ಕರಾವಳಿಯತ್ತ ಗಾಳಿ ಸಾಗುತ್ತಿದೆ. ಹೀಗಾಗಿ ರಾಜ್ಯದ ಕರಾವಳಿ ಸೇರಿದಂತೆ ಹಲವೆಡೆ ಭಾರಿ ಮಳೆ ಆಗುತ್ತಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಮುಂದುವರಿದಿದೆ.