![](https://kannadadunia.com/wp-content/uploads/2022/07/rain-2-1658064298.jpg)
ಬೆಂಗಳೂರು: ಕರಾವಳಿ ಪ್ರದೇಶ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಶುಕ್ರವಾರದಿಂದ ಐದು ದಿನ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಏಪ್ರಿಲ್ 14ರಿಂದ 18ರವರೆಗೆ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಏಪ್ರಿಲ್ 15 ರಿಂದ 18ರವರೆಗೆ ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ, ಚಿತ್ರದುರ್ಗ ಜಿಲ್ಲೆಗಳ ಹಲವೆಡೆ ಮಳೆಯಾಗಲಿದೆ.
ಏಪ್ರಿಲ್ 15 ರಿಂದ 18ರವರೆಗೆ ಬೆಳಗಾವಿ, ಬಾಗಲಕೋಟೆ, ಕಲಬುರ್ಗಿ, ವಿಜಯಪುರ, ಹಾವೇರಿ, ಗದಗ, ಧಾರವಾಡ ಜಿಲ್ಲೆಗಳ ಕೆಲವೆಡೆ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.