alex Certify ಗಮನಿಸಿ…! ರಾಜ್ಯದಲ್ಲಿ ಎರಡು ದಿನ ಭಾರಿ ಮಳೆ ಮುನ್ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ…! ರಾಜ್ಯದಲ್ಲಿ ಎರಡು ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದ್ದು, ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹೇಳಲಾಗಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಮಂಡ್ಯ, ಮೈಸೂರು, ರಾಮನಗರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗಲಿದ್ದು, ಉತ್ತರ ಒಳನಾಡಿನ ಬೀದರ್, ಕಲಬುರ್ಗಿ ಜಿಲ್ಲೆಯ ಕಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...