ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿt ಉಂಟಾಗಿದ್ದು, ಮುಂದಿನ ದಿನಗಳಲ್ಲಿ ಅದು ಚಂಡಮಾರುತವಾಗಿ ಮಾರ್ಪಾಡುವ ಸಾಧ್ಯತೆ ಇದೆ. ಇದರ ಪರಿಣಾಮ ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶದಲ್ಲಿ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಡಿಸೆಂಬರ್ 12ರಂದು ದಕ್ಷಿಣ ಒಳನಾಡು ಭಾಗದ ಕೆಲವು ಜಿಲ್ಲೆಗಳು, ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಡಿಸೆಂಬರ್ 13 ಮತ್ತು 14 ರಂದು ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿಯೂ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.