ಉಡುಪಿ: ಇಂದಿನಿಂದ ಮೂರು ದಿನಗಳ ಕಾಲ ಕರಾವಳಿಯಲ್ಲಿ ಭಾರಿ ವೇಗದ ಗಾಳಿ, ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಜೂ. 8ರಿಂದ 11ರವರೆಗೆ ಕರಾವಳಿ ಭಾಗದಲ್ಲಿ ಗಂಟೆಗೆ 35 ರಿಂದ 45 ಕಿ.ಮೀ ವೇಗದ, ಒಮ್ಮೊಮ್ಮೆ 55 ರಿಂದ 65ಕಿಮೀ ವೇಗದ ಗಾಳಿ ಬೀಸಲಿದೆ. ರಾಜ್ಯದ ಕರಾವಳಿ ಪ್ರದೇಶದ ವ್ಯಾಪ್ತಿಯಲ್ಲಿ ಭಾರಿ ವೇಗದ ಗಾಳಿ ಬೀಸುವ ಸಾಧ್ಯತೆ ಇದ್ದು, ಈ ಅವಧಿಯಲ್ಲಿ ಮೀನುಗಾರಿಕೆಗೆ ಸಮುದ್ರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ.
ಕೆಲವು ಪ್ರದೇಶಗಳಲ್ಲಿ 64 ಮಿ.ಮೀ. ನಿಂದ 115 ಮಿಲಿಮೀಟರ್ ವರೆಗೆ, ಮತ್ತೆ ಕೆಲವು ಪ್ರದೇಶಗಳಲ್ಲಿ 204 ಮಿ.ಮೀ. ವರೆಗೆ ಮಳೆಯಾಗುವ ಸಂಭವ ಇದೆ.