alex Certify ಗಮನಿಸಿ…! ಎರಡು ದಿನ ಗುಡುಗು ಸಹಿತ ಭಾರೀ ಮಳೆ, ಯೆಲ್ಲೋ ಅಲರ್ಟ್ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ…! ಎರಡು ದಿನ ಗುಡುಗು ಸಹಿತ ಭಾರೀ ಮಳೆ, ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದಲ್ಲಿ ಎರಡು ದಿನ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಎಪ್ರಿಲ್ 12 ರ ನಂತರ ಮಳೆ ಬಿರುಸುಗೊಳ್ಳಲಿದ್ದು, ಏಪ್ರಿಲ್ 14, 15 ರಂದು ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಹಿನ್ನಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಮಲೆನಾಡು ಭಾಗದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಜಿಲ್ಲೆಗಳಲ್ಲಿ ಏಪ್ರಿಲ್ 14, 15 ರಂದು ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು, ಬಳ್ಳಾರಿ, ಚಾಮರಾಜನಗರ, ದಾವಣಗೆರೆ, ಕೋಲಾರ, ಚಿತ್ರದುರ್ಗ, ಮೈಸೂರು, ಮಂಡ್ಯ, ರಾಮನಗರ, ತುಮಕೂರು, ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ವಿಜಯಪುರ ಮೊದಲಾದ ಕಡೆ ಏಪ್ರಿಲ್ 13 ರಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ. ಮುಂದಿನ 48 ಗಂಟೆಗಳ ಕಾಲ ಹಲವು ಭಾಗದಲ್ಲಿ ಸಾಧಾರಣ ಮಳೆಯಾಗಲಿದ್ದು ನಂತರದಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...