ಬೆಂಗಳೂರು: ರಾಜ್ಯದ ಹಲವು ಭಾಗದಲ್ಲಿ ಮುಂಗಾರು ಮಳೆ ಬಿರುಸುಗೊಂಡಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿರುವ ಕಾರಣ ಆಗಸ್ಟ್ 8 ಮತ್ತು 9 ರಂದು ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಮಲೆನಾಡು ಭಾಗದ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಹಾಗೂ ಮೈಸೂರು ಮತ್ತು ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿರುವ ಹಿನ್ನಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಪ್ರದೇಶದಲ್ಲಿ 50 ಕಿಲೋಮೀಟರ್ ವೇಗದ ಗಾಳಿ ಬೀಸುತ್ತಿದ್ದು, 3.6 ಮೀಟರ್ ಗಳಷ್ಟು ಎತ್ತರದ ಅಲೆಗಳು ಏಳುವ ಸೂಚನೆಯಿದೆ. ಈ ಕಾರಣದಿಂದ ಆಗಸ್ಟ್ 11 ರವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.