alex Certify Shocking Video | ಬೈಕಿನಲ್ಲಿ ಹೋಗುವಾಗಲೇ ಕಚ್ಚಿದ ಕಾಳಿಂಗ ಸರ್ಪ; ಸ್ಥಳದಲ್ಲೇ ಸಾವನ್ನಪ್ಪಿದ ಉರಗತಜ್ಞ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Shocking Video | ಬೈಕಿನಲ್ಲಿ ಹೋಗುವಾಗಲೇ ಕಚ್ಚಿದ ಕಾಳಿಂಗ ಸರ್ಪ; ಸ್ಥಳದಲ್ಲೇ ಸಾವನ್ನಪ್ಪಿದ ಉರಗತಜ್ಞ

ಉರಗ ತಜ್ಞನೊಬ್ಬ ತಾನು ಹಿಡಿದ ಕಾಳಿಂಗ ಸರ್ಪವನ್ನು ಕಾಡಿಗೆ ಬಿಡಲು ತೆಗೆದುಕೊಂಡು ಬೈಕಿನಲ್ಲಿ ಹೋಗುವಾಗಲೇ ಅದು ಕಚ್ಚಿದ್ದು, ಇದರ ಪರಿಣಾಮವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಆಘಾತಕಾರಿ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈ ಘಟನೆ ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ ನಡೆದಿದ್ದು, ಮನೀಶ್ ಎಂಬ ಉರಗತಜ್ಞ ತನ್ನ ಸ್ನೇಹಿತನ ಜೊತೆ ಕಾಳಿಂಗ ಸರ್ಪವನ್ನು ಕೈನಲ್ಲಿ ಹಿಡಿದುಕೊಂಡು ಬೈಕಿನಲ್ಲಿ ಹೋಗುತ್ತಿದ್ದ. ಈ ವೇಳೆ ಅದು ಏಕಾಏಕಿ ಮನೀಶ್ ಗೆ ಕಚ್ಚಿದೆ.

ಇದರಿಂದ ಗಾಬರಿಗೊಂಡ ಆತನ ಸ್ನೇಹಿತ ಬೈಕ್ ನಿಲ್ಲಿಸಲು ಮುಂದಾಗಿದ್ದು, ಅಷ್ಟರೊಳಗಾಗಿ ಮನೀಶ್ ಗೆ ವಿಷ ಏರಿದ್ದ ಪರಿಣಾಮ ಆತ ಕುಸಿದು ಬಿದ್ದಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರೊಳಗಾಗಿ ಮೃತಪಟ್ಟಿದ್ದ ಎನ್ನಲಾಗಿದೆ. ಈ ಅಘಾತಕಾರಿ ಘಟನೆಯ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...