ಬೆಂಗಳೂರು : ರಾಜ್ಯದಲ್ಲಿ ಮತ್ತೆ ಚಳಿ ಹೆಚ್ಚಾಗಿದ್ದು, ಮುಂದಿನ 3-4 ದಿನ ಚಳಿ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇದುವರೆಗೆ ಮೋಡ ಮುಸುಕಿದ ವಾತಾವರಣವಿತ್ತು , ಆದರೆ ನಿನ್ನೆಯಿಂದ ಮತ್ತೆ ಚಳಿ ಆರಂಭವಾಗಿದೆ. ಮುಂದಿನ 3-4 ದಿನ ಚಳಿ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಹುತೇಕ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣವೇ ಇರಲಿದ್ದು, ದಕ್ಷಿಣ ಒಳನಾಡಿನ ಮಳೆ ಮುನ್ಸೂಚನೆ ಇಲ್ಲದಿದ್ದರೂ ಮೋಡ ಕವಿದ ವಾತಾವರಣ ಇರಲಿದೆ.
ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನದಲ್ಲಿ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.