ಬೆಂಗಳೂರು: ವಾಯುಭಾರ ಕುಸಿತ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಂಗಳವಾರದಿಂದ ಮೂರು ದಿನ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಳೆ ಸಂಪೂರ್ಣ ಕಡಿಮೆಯಾಗಿ ವಾಯುಭಾರ ಕುಸಿತವಾಗಿದ್ದು, ನವೆಂಬರ್ 22 ರಿಂದ 24ರ ವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಚಳಿಯ ಜೊತೆಗೆ ಮಳೆಯಾಗಲಿದೆ ಎಂದು ಹೇಳಲಾಗಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ರಾಮನಗರ, ಮಂಡ್ಯ, ತುಮಕೂರು, ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉತ್ತರ ಒಳನಾಡಿನ ವಿಜಯಪುರ, ಹಾವೇರಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.