ಬೆಂಗಳೂರು: ಹವಾಮಾನ ಬದಲಾವಣೆಯಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ತಾಪಮಾನ ಭಾರಿ ಕುಸಿತ ಕಂಡಿದ್ದು, ರಾಜ್ಯದಲ್ಲಿ ಚಳಿಯ ತೀವ್ರತೆ ಹೆಚ್ಚಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಅಕ್ಟೋಬರ್ ತಿಂಗಳ ಚಳಿ 10 ವರ್ಷ ಕನಿಷ್ಠ ಮಟ್ಟಕ್ಕೆ ಕುಸಿದಿದೆ.
ಮಲೆನಾಡು, ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಉಷ್ಣಾಂಶ ಇಳಿಕೆಯಾಗಿದೆ. ಕಳೆದ ನಾಲ್ಕೈದು ದಿನಗಳಿಂದ ಬಹುತೇಕ ಜಿಲ್ಲೆಗಳಲ್ಲಿ ಚಳಿಯ ತೀವ್ರತೆ ಹೆಚ್ಚಾಗಿದೆ. ಆದರೆ, ಕೆಲವು ಜಿಲ್ಲೆಗಳಲ್ಲಿ ತಾಪಮಾನ ಸ್ವಲ್ಪ ಹೆಚ್ಚಾಗಿದೆ.
ರಾಜ್ಯದ ಸುಮಾರು ಶೇಕಡ 73ರಷ್ಟು ಪ್ರದೇಶದಲ್ಲಿ 12 ರಿಂದ 16 ಡಿಗ್ರಿ ಸೆಲ್ಸಿಯಸ್ ವರೆಗೆ ಕನಿಷ್ಠ ತಾಪಮಾನ ದಾಖಲಾಗಿದೆ. ವಿಜಯಪುರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಮೊದಲಾದ ಜಿಲ್ಲೆಗಳಲ್ಲಿ ಚಳಿಯ ತೀವ್ರತೆ ಹೆಚ್ಚಾಗಿದ್ದು, ಜನ ತತ್ತರಿಸಿದ್ದಾರೆ.