ನವದೆಹಲಿ: ದೇಶದ ಪ್ರತಿ ಪ್ರಜೆಗೂ ಕೊರೋನಾ ಲಸಿಕೆ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮುಖ್ಯಮಂತ್ರಿಗಳ ಜೊತೆಗಿನ ಸಭೆಯಲ್ಲಿ ಮಾತನಾಡಿದ ಅವರು, ಕೊರೋನಾ ಲಸಿಕೆ ಲಭ್ಯತೆ ಸನ್ನಿಹಿತವಾಗಿದೆ. ಎಲ್ಲ ಮಾನದಂಡಗಳನ್ನು ಪಾಲಿಸಿ ಲಸಿಕೆ ವಿತರಣೆ ಮಾಡಲಾಗುವುದು. ಇದಕ್ಕಾಗಿ ರಾಜ್ಯಗಳು ಕೋಲ್ಡ್ ಸ್ಟೋರೇಜ್ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದ್ದಾರೆ.
ಯಾವುದೇ ಸಮಯದಲ್ಲಿ ಲಸಿಕೆ ಲಭಿಸಬಹುದಾಗಿದ್ದು, ದೇಶದ ಎಲ್ಲ ಜನರಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗುತ್ತದೆ. ಲಸಿಕೆಯ ಸಂಶೋಧಕರೊಂದಿಗೆ ಸರ್ಕಾರ ಸಂಪರ್ಕದಲ್ಲಿದ್ದು, ಎಲ್ಲಾ ವೈಜ್ಞಾನಿಕ ಮಾನದಂಡ ಪೂರೈಸಿ ಲಸಿಕೆ ಲಭ್ಯವಾಗುವಂತೆ ನೋಡಿಕೊಳ್ಳಲಾಗಿದೆ. ರಾಜ್ಯ ಸರ್ಕಾರಗಳು ಲಸಿಕೆಯನ್ನು ಸುರಕ್ಷಿತವಾಗಿಡಲು ಕೋಲ್ಡ್ ಸ್ಟೋರೇಜ್ ವ್ಯವಸ್ಥೆ ಮಾಡಬೇಕು ಎಂದು ಹೇಳಿದ್ದಾರೆ.