ಬೆಂಗಳೂರು: ರಾಜ್ಯಾದ್ಯಂತ ಚಳಿಯ ವಾತಾವರಣ ಹೆಚ್ಚಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶ ಪ್ರಮಾಣ 15 ಡಿಗ್ರಿ ಸೆಲ್ಸಿಯಸ್ ಗಿಂತ ಕಡಿಮೆಯಾಗಿದ್ದು, ಮುಂದಿನ ಮೂರು ದಿನ ಕನಿಷ್ಠ ಉಷ್ಣಾಂಶದಲ್ಲಿ ಇನ್ನೂ ಎರಡರಿಂದ ನಾಲ್ಕು ಡಿಗ್ರಿ ಸೆಲ್ಸಿಯಸ್ ನಷ್ಟು ಕಡಿಮೆಯಾಗಲಿದೆ, ಮಂಜು ಮುಸುಕಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ ಮೂರು ನಾಲ್ಕು ದಿನಗಳಿಂದ ರಾಜ್ಯದಲ್ಲಿ ಚಳಿಯ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕನಿಷ್ಠ ಉಷ್ಣಾಂಶದಲ್ಲಿ ಇಳಿಕೆಯಾಗುತ್ತಿದೆ. ಕರಾವಳಿ ಜಿಲ್ಲೆಗಳು, ಉತ್ತರ ಕರ್ನಾಟಕದ ಒಂದೆರಡು ಜಿಲ್ಲೆಗಳನ್ನು ಹೊರತುಪಡಿಸಿ ಎಲ್ಲಾ ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶ 15 ಡಿಗ್ರಿ ಸೆಲ್ಸಿಯಸ್ ನಷ್ಟು ಇಳಿಕೆಯಾಗಿದೆ.