ಬೆಂಗಳೂರು : ಜನವರಿ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಮಾಜಿ ಸಚಿವ ಆರ್. ಅಶೋಕ್ ಹೊಸ ಬಾಂಬ್ ಸಿಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು ಜನವರಿ ನಂತರ ಕಾಂಗ್ರೆಸ್ ಸರ್ಕಾರ ಬಿದ್ದೋಗುತ್ತೆ, ಕಾಂಗ್ರೆಸ್ನಲ್ಲಿ ಹಲವು ಗ್ಯಾಂಗ್ಗಳಾಗಿವೆ , ಆದ್ದರಿಂದ ಈ ಸರ್ಕಾರ ಬಹಳ ದಿನ ನಡೆಯುವುದಿಲ್ಲ ಎಂದು ಮಾಜಿ ಸಚಿವ ಆರ್. ಅಶೋಕ್ ಹೇಳಿದರು.
ಮಾಜಿ ಸಚಿವ ಎಸ್.ಟಿ ಸೋಮಶೇಖರ್ ಅವರನ್ನ ಕರೆದು ಮಾತನಾಡುವ ಕೆಲಸ ಮಾಡುತ್ತೇವೆ. ಅವರು ಮುಂಚೆ ಅಲ್ಲಿದ್ದವರಲ್ಲ, ಅವರನ್ನ ಬಿಜೆಪಿಗೆ ನಾನೇ ಕರೆದುಕೊಂಡು ಬಂದಿದ್ದು, ಹಾಗಾಗಿ ಆ ರೀತಿ ಮಾತನಾಡಿದ್ದಾರೆ ಎಂದರು.ಇತ್ತೀಚೆಗಷ್ಟೇ ಎಸ್ ಟಿ ಸೋಮಶೇಖರ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿ ಭಾರಿ ಚರ್ಚೆಯಾಗಿತ್ತು, ಶೀಘ್ರವೇ ಸೋಮಶೇಖರ್ ಕಾಂಗ್ರೆಸ್ ಸೇರ್ಪಡೆಯಾಗ್ತಾರೆ ಎಂಬ ವಿಚಾರ ಬಿಜೆಪಿ ಪಾಳಯದಲ್ಲಿ ತಲ್ಲಣ ಉಂಟು ಮಾಡಿತ್ತು.