alex Certify ಜನವರಿ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಪತನ : ಮಾಜಿ ಸಚಿವ ಆರ್. ಅಶೋಕ್ ಬಾಂಬ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜನವರಿ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಪತನ : ಮಾಜಿ ಸಚಿವ ಆರ್. ಅಶೋಕ್ ಬಾಂಬ್

ಬೆಂಗಳೂರು :  ಜನವರಿ ಬಳಿಕ  ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಮಾಜಿ ಸಚಿವ ಆರ್. ಅಶೋಕ್ ಹೊಸ ಬಾಂಬ್ ಸಿಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು ಜನವರಿ ನಂತರ ಕಾಂಗ್ರೆಸ್ ಸರ್ಕಾರ ಬಿದ್ದೋಗುತ್ತೆ, ಕಾಂಗ್ರೆಸ್ನಲ್ಲಿ ಹಲವು ಗ್ಯಾಂಗ್ಗಳಾಗಿವೆ , ಆದ್ದರಿಂದ ಈ ಸರ್ಕಾರ ಬಹಳ ದಿನ ನಡೆಯುವುದಿಲ್ಲ ಎಂದು ಮಾಜಿ ಸಚಿವ ಆರ್. ಅಶೋಕ್ ಹೇಳಿದರು.

ಮಾಜಿ ಸಚಿವ ಎಸ್.ಟಿ ಸೋಮಶೇಖರ್ ಅವರನ್ನ ಕರೆದು ಮಾತನಾಡುವ ಕೆಲಸ ಮಾಡುತ್ತೇವೆ. ಅವರು ಮುಂಚೆ ಅಲ್ಲಿದ್ದವರಲ್ಲ, ಅವರನ್ನ ಬಿಜೆಪಿಗೆ ನಾನೇ ಕರೆದುಕೊಂಡು ಬಂದಿದ್ದು, ಹಾಗಾಗಿ ಆ ರೀತಿ ಮಾತನಾಡಿದ್ದಾರೆ ಎಂದರು.ಇತ್ತೀಚೆಗಷ್ಟೇ ಎಸ್ ಟಿ ಸೋಮಶೇಖರ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿ ಭಾರಿ ಚರ್ಚೆಯಾಗಿತ್ತು, ಶೀಘ್ರವೇ ಸೋಮಶೇಖರ್ ಕಾಂಗ್ರೆಸ್ ಸೇರ್ಪಡೆಯಾಗ್ತಾರೆ ಎಂಬ ವಿಚಾರ ಬಿಜೆಪಿ ಪಾಳಯದಲ್ಲಿ ತಲ್ಲಣ ಉಂಟು ಮಾಡಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...