ಮಂಡ್ಯ : ಮೇ ತಿಂಗಳ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಪತನಗೊಳ್ಳಲಿದೆ, ಈ ಸರ್ಕಾರ 5 ವರ್ಷ ಇರಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಬೆಳತೂರು ಗ್ರಾಮದಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ 5 ವರ್ಷ ಇರಲ್ಲ, ಮೇ ತಿಂಗಳ ಬಳಿಕ ಸರ್ಕಾರ ಉರುಳೋದು ಖಚಿತ, ಯಾವುದೇ ಕಾರಣಕ್ಕೂ ಸರ್ಕಾರ ಉಳಿಯಲ್ಲ ಎಂದು ಕುಮಾರಸ್ವಾಮಿ ಸ್ಪೋಟಕ ಹೇಳಿದ್ದಾರೆ.
ಅದೇ ರೀತಿ ‘ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ. ಈ ಸರ್ಕಾರ ಯಾವಾಗ ಬೇಕಾದರೂ ಪತನವಾಗಬಹುದು. ಪ್ರಭಾವಿ ಸಚಿವರೊಬ್ಬರು ತಮ್ಮ ಮೇಲಿನ ಪ್ರಕರಣಗಳಿಂದ ತಪ್ಪಿಸಿಕೊಳ್ಳಲು ಹರಸಾಹಸ ಮಾಡುತ್ತಿದ್ದಾರೆ. ಯಾವ ಕ್ಷಣದಲ್ಲಾದರೂ ‘ಮಹಾರಾಷ್ಟ್ರದಲ್ಲಾದಂತೆ’ ಇಲ್ಲಿ ಯಾರು ಬಂಡಾಯ ನಾಯಕ ಹುಟ್ಟಿಕೊಳ್ಳುತ್ತಾರೋ ಗೊತ್ತಿಲ್ಲ. ಈಗಿರುವ ರಾಜಕೀಯ ವಾತಾವರಣ ನೋಡಿದರೆ ಏನು ಬೇಕಾದರೂ ಆಗಬಹುದು. ಸರ್ಕಾರ ಯಾವಾಗ ಬಿದ್ಹೋಗುತ್ತೋ ಗೊತ್ತಿಲ್ಲ’ ಎಂದರು.