ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಬಾಂಬ್ಬೆಂಗಳೂರು : ಸಂಕ್ರಾಂತಿ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದು ಅನುಮಾನ, ಕಾಂಗ್ರೆಸ್ ಶಾಸಕರೇ ಸರ್ಕಾರದ ವಿರುದ್ಧ ತಿರುಗಿ ಬೀಳುತ್ತಾರೆ ಎಂದು ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಹೊಸ ಬಾಂಬ್ ಸಿಡಿಸಿದ್ದಾರೆ.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಡಿಸಿಎಂ ಡಿಕೆ ಶಿವಕುಮಾರ್ ರೀತಿ ಆಪರೇಷನ್ ಹಸ್ತದ ಕೆಲಸವನ್ನೂ ನಾವು ಮಾಡಲ್ಲ, ಕೆಲವರು ನನ್ನ ಜೊತೆ ವೈಯಕ್ತಿಕವಾಗಿ ಮಾತನಾಡಿದ್ದಾರೆ. ತಮ್ಮ ನೋವನ್ನ ಹೇಳಿಕೊಂಡಿದ್ದಾರೆ. ನೋಡಿ ಬೇಕಾದರೆ ಕಾಂಗ್ರೆಸ್ ಶಾಸಕರೇ ಸರ್ಕಾರದ ವಿರುದ್ಧ ತಿರುಗಿ ಬೀಳುತ್ತಾರೆ ಎಂದು ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಹೊಸ ಬಾಂಬ್ ಸಿಡಿಸಿದ್ದಾರೆ.
ಸಂಕ್ರಾಂತಿ ನಂತರ ಕಾದು ನೋಡಿ..ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದು ಅನುಮಾನ. ನಾವು ಯಾವುದೇ ರೀತಿಯ ಆಪರೇಷನ್ ಮಾಡುತ್ತಿಲ್ಲ. ನಮ್ಮ ಸಂಪರ್ಕದಲ್ಲಿ ಯಾರೂ ಇಲ್ಲ ಎಂದು ಹೇಳಿದ್ದಾರೆ.