ಬಿಹಾರದಲ್ಲಿ ಆರ್ ಜೆಡಿ-ಜೆಡಿಯು ಮೈತ್ರಿ ಪತನಗೊಂಡಿದ್ದು, ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ಸಲ್ಲಿಸಿದ್ದಾರೆ.
ಬಿಹಾರ ರಾಜ್ಯಪಾಲರನ್ನು ಭೇಟಿ ಮಾಡಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ಬಿಹಾರ ರಾಜಕೀಯದ ಬಗ್ಗೆ ಇದ್ದ ಅನಿಶ್ಚಿತತೆ ಅಂತಿಮವಾಗಿ ಇಂದು (ಜನವರಿ 28) ಕೊನೆಗೊಂಡಿದೆ. ಏಕೆಂದರೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ರಾಜೀನಾಮೆಯನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ. ಸಂಜೆ ವೇಳೆಗೆ ನಿತೀಶ್ ಕುಮಾರ್ ಬಿಜೆಪಿಯ ಬೆಂಬಲದೊಂದಿಗೆ ಹೊಸ ಸರ್ಕಾರವನ್ನು ರಚಿಸಲಿದ್ದಾರೆ.
ಹಲವು ಬಾರಿ ಬಿಜೆಪಿ ಜೊತೆ ಮತ್ತು ಕೆಲವು ಬಾರಿ ಕಾಂಗ್ರೆಸ್ & ಆರ್ಜೆಡಿ ಜೊತೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ಕೈಜೋಡಿಸಿದ್ದಾರೆ. ಅದೇ ರೀತಿ ಇದೀಗ ನಿತೀಶ್ ಕುಮಾರ್ ಮತ್ತೊಮ್ಮೆ ಕಾಂಗ್ರೆಸ್ & ಆರ್ಜೆಡಿಗೆ ಕೈಕೊಟ್ಟು ಬಿಜೆಪಿ ಜೊತೆ ಹೋಗಿದ್ದಾರೆ. ಪ್ರತಿಪಕ್ಷಗಳ ಒಗ್ಗಟ್ಟು ಛಿದ್ರವಾಗಿ, ಒಡೆದ ಮನೆಯಾಗಿದೆ. ಕೇಂದ್ರದ ಬಿಜೆಪಿ ಸರ್ಕಾರಕ್ಕೆ 2024ರ ಚುನಾವಣೆಯಲ್ಲಿ ಬಿಸಿ ಮುಟ್ಟಿಸಿ, ಮೋದಿ ಸರ್ಕಾರವನ್ನು ಸೋಲಿಸುತ್ತೇವೆ ಅಂತಾ ವಿಪಕ್ಷಗಳು ತೊಡೆ ತಟ್ಟಿವೆ.