
ಬೆಂಗಳೂರು: ಬೆಂಗಳೂರಿನಲ್ಲಿ ಕಾಲೇಜು ಆರಂಭವಾದ ನಂತರ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. 5 ದಿನದಲ್ಲಿ 117 ವಿದ್ಯಾರ್ಥಿಗಳು ಮತ್ತು 51 ಶಿಕ್ಷಕರಿಗೆ ಸೋಂಕು ತಗುಲಿರುವುದು ಗೊತ್ತಾಗಿದೆ.
ನವೆಂಬರ್ 17 ರಿಂದ 21 ರವರೆಗೆ ಕಾಲೇಜ್ ಗಳಲ್ಲಿ ಕೋವಿಡ್ ಟೆಸ್ಟ್ ಮಾಡಿಸಲಾಗಿದೆ. 26,205 ವಿದ್ಯಾರ್ಥಿಗಳು, 5,378 ಉಪನ್ಯಾಸಕರು, 2680 ಸಿಬ್ಬಂದಿ ಸೇರಿ 38,653 ಜನರಿ ಕೋವಿಡ್ ಟೆಸ್ಟ್ ಮಾಡಲಾಗಿದೆ. ಈ ಪೈಕಿ 168 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಹೇಳಲಾಗಿದೆ.