ಬೆಂಗಳೂರು: ಪದವಿ ಕಾಲೇಜುಗಳ ಭೌತಿಕ ತರಗತಿಗಳ ಆರಂಭದ ಬಗ್ಗೆ ಸರ್ಕಾರದ ಮಟ್ಟದಲ್ಲಿ ಯಾವುದೇ ತೀರ್ಮಾನ ಆಗಿಲ್ಲ ಎಂದು ಉನ್ನತ ಶಿಕ್ಷಣ ಸಚಿವರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದರು.
ಈ ಬಗ್ಗೆ ಬೆಂಗಳೂರಿನಲ್ಲಿ ಹೇಳಿಕೆ ನೀಡಿರುವ ಅವರು, ಸದ್ಯಕ್ಕೆ ಪದವಿ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವುದು ಮಾತ್ರ ಸರ್ಕಾರದ ಆದ್ಯತೆ. ಅದರ ಹೊರತಾಗಿ ಕಾಲೇಜುಗಳನ್ನು ಆರಂಭಿಸುವುದಲ್ಲ. ಕೋವಿಡ್ ಸೋಂಕು ಇನ್ನೂ ಪೂರ್ಣವಾಗಿ ನಿವಾರಣೆ ಆಗದಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಯಾವುದೇ ತೀರ್ಮಾನ ಮಾಡಲಾಗಿಲ್ಲ ಎಂದರು.