alex Certify ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್: ಸರ್ಕಾರಿ ಕಾಲೇಜು ಪಿಜಿ ಕೋರ್ಸ್ ಶುಲ್ಕ ಹೆಚ್ಚಳ ಇಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್: ಸರ್ಕಾರಿ ಕಾಲೇಜು ಪಿಜಿ ಕೋರ್ಸ್ ಶುಲ್ಕ ಹೆಚ್ಚಳ ಇಲ್ಲ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸ್ನಾತಕೋತ್ತರ ಪದವಿ ಪ್ರವೇಶ ಶುಲ್ಕ ಹೆಚ್ಚಳ ಮಾಡುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿ ಆದೇಶ ಹೊರಡಿಸಿದೆ.

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಎಂಸಿಎ, ಎಂಬಿಎ ಒಳಗೊಂಡಂತೆ ಸ್ನಾತಕೋತ್ತರ ಪದವಿಗೆ 2023 -24ನೇ ಸಾಲಿನಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಹಿಂದಿನ ಶುಲ್ಕವೇ ಅನ್ವಯವಾಗಲಿದೆ.

ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಗೆ ಒಳಪಡುವ ಕೆಲವು ಪ್ರಥಮ ದರ್ಜೆ ಕಾಲೇಜುಗಳಲ್ಲಿ ಆರಂಭಿಸಲಾದ ಸ್ನಾತಕೋತ್ತರ ಪದವಿ ಕೋರ್ಸ್ ಗಳಿಗೆ 2019 -20 ನೇ ಸಾಲಿನಲ್ಲಿದ್ದ ಶುಲ್ಕವನ್ನು ಮುಂದಿನ ವರ್ಷಗಳಲ್ಲೂ ಮುಂದುವರೆಸಲಾಗಿದ್ದು, 2023 -24ನೇ ಸಾಲಿಗೂ ಅದೇ ಶುಲ್ಕವನ್ನೇ ನಿಗದಿಪಡಿಸಲಾಗಿದೆ.

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಹಿತದೃಷ್ಟಿ ಮತ್ತು ಪೋಷಕರಿಗೆ ಆರ್ಥಿಕ ಹೊರೆಯಾಗದಂತೆ ನೋಡಿಕೊಳ್ಳಲು ಕಾಲೇಜು ಶಿಕ್ಷಣ ಇಲಾಖೆ ಶುಲ್ಕ ಹೆಚ್ಚಳ ಮಾಡಿಲ್ಲವೆಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...