ಬೆಂಗಳೂರು: ರಾಜ್ಯದ ಕಾಲೇಜುಗಳಲ್ಲಿ ರಾಷ್ಟ್ರಧ್ವಜ ಅಭಿಯಾನ ಕೈಗೊಳ್ಳಲಾಗಿದೆ. ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಸರ್ಕಾರ ಆಗಸ್ಟ್ 11 ರಿಂದ 17ರ ವರೆಗೆ ಪ್ರತಿ ಮನೆಯಲ್ಲಿ ತ್ರಿವರ್ಣ ಧ್ವಜ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಇದಕ್ಕೆ ಸಾತ್ ನೀಡಲು ರಾಜ್ಯದ ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯ ಎಲ್ಲಾ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಕಾರ್ಯಕ್ರಮ ಯಶಸ್ಸಿಗೆ ಸುತ್ತೋಲೆ ಹೊರಡಿಸಲಾಗಿದೆ.
ದೇಶದ ಮನೆ ಮನೆಯಲ್ಲೂ ರಾಷ್ಟ್ರಧ್ವಜ ಹಾರಿಸಿ ರಾಷ್ಟ್ರ ಪ್ರೇಮ ಅಭಿವ್ಯಕ್ತಗೊಳಿಸಲು ಕರೆ ನೀಡಲಾಗಿದೆ. ಇದಕ್ಕೆ ಪೂರಕವಾಗಿ ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯ ಎಲ್ಲಾ ವಿವಿಗಳು, ಕಾಲೇಜುಗಳು ಮತ್ತು ಶಿಕ್ಷಣ ಇಲಾಖೆ ವ್ಯಾಪ್ತಿಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಖಾಸಗಿ ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳು, ತಾಂತ್ರಿಕ ಶಿಕ್ಷಣ ಇಲಾಖೆಯ ಕಾಲೇಜುಗಳಲ್ಲಿ ಕಾರ್ಯಕ್ರಮ ಜಾರಿಗೊಳಿಸುವಂತೆ ಸುತ್ತೋಲೆ ಹೊರಡಿಸಲಾಗಿದೆ.