alex Certify ವಿಶ್ವವಿದ್ಯಾಲಯ, ಪದವಿ, ಡಿಪ್ಲೋಮೊ ಕಾಲೇಜ್ ಗಳಿಗೆ 3 ದಿನ ರಜೆ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಶ್ವವಿದ್ಯಾಲಯ, ಪದವಿ, ಡಿಪ್ಲೋಮೊ ಕಾಲೇಜ್ ಗಳಿಗೆ 3 ದಿನ ರಜೆ ಘೋಷಣೆ

ಬೆಂಗಳೂರು: ಉನ್ನತ ಶಿಕ್ಷಣ ವ್ಯಾಪ್ತಿಗೊಳಪಡುವ ಕಾಲೇಜು ವಿವಿಗಳಿಗೆ ಮೂರು ದಿನ ರಜೆ ಘೋಷಣೆ ಮಾಡಲಾಗಿದೆ.

ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಗೊಳಪಡುವ ವಿಶ್ವವಿದ್ಯಾಲಯ, ಕಾಲೇಜು ಶಿಕ್ಷಣ ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪದವಿ ಕಾಲೇಜುಗಳು, ಡಿಪ್ಲೋಮೊ  ಕಾಲೇಜ್ ಗಳಿಗೆ ಫೆ. 9, 10, 11 ರಂದು ರಜೆ ಘೋಷಿಸಲಾಗಿದೆ.

ರಾಜ್ಯದ ಕಾಲೇಜುಗಳಲ್ಲಿ ಅಲ್ಲಲ್ಲಿ ಬಿಗುವಿನ ವಾತಾವರಣವಿರುವ ಹಿನ್ನೆಲೆಯಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮುಂಜಾಗ್ರತೆ ಕ್ರಮವಾಗಿ ಮೂರು ದಿನಗಳ ಕಾಲ ರಜೆ ಘೋಷಣೆ ಮಾಡಲಾಗಿದೆ.

ಉನ್ನತ ಶಿಕ್ಷಣ ವ್ಯಾಪ್ತಿಗೆ ಒಳಪಡುವ ಎಲ್ಲಾ ವಿಶ್ವವಿದ್ಯಾಲಯಗಳು, ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪದವಿ ಕಾಲೇಜುಗಳು, ಡಿಪ್ಲೋಮೋ ಕಾಲೇಜುಗಳ ವಿದ್ಯಾರ್ಥಿಗಳಿಗೆ ಮಾತ್ರ ರಜೆ ಘೋಷಿಸಲಾಗಿದೆ. ಈ ದಿನಾಂಕಗಳಂದು ಪರೀಕ್ಷೆಗಳು ನಡೆಯುತ್ತಿದ್ದಲ್ಲಿ ಯಥಾವತ್ತಾಗಿ ನಿಯೋಜಿತ ದಿನಗಳಂದು ಪರೀಕ್ಷೆ ನಡೆಯಲಿದೆ ಎಂದು ಉನ್ನತ ಶಿಕ್ಷಣ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿಗಳು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...