
ಬೆಂಗಳೂರು: ಜುಲೈ 26 ಸೋಮವಾರದಿಂದ ರಾಜ್ಯಾದ್ಯಂತ ಪದವಿ ಕಾಲೇಜುಗಳು ಆರಂಭವಾಗಲಿವೆ. ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್ ಪದವಿಯ ಭೌತಿಕ ತರಗತಿಗಳು ಸೋಮವಾರದಿಂದ ಆರಂಭವಾಗಲಿದ್ದು, ಉನ್ನತ ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿಗಳ ಸ್ವಾಗತಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಆನ್ಲೈನ್ ಮತ್ತು ಆಫ್ಲೈನ್ ನಲ್ಲಿಯೂ ತರಗತಿಗಳನ್ನು ನಡೆಸಲು ಕ್ರಮಕೈಗೊಳ್ಳಲಾಗಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಜೊತೆಗೆ ಪ್ರತಿ ಕೊಠಡಿಗೆ ಕನಿಷ್ಠ 30 ವಿದ್ಯಾರ್ಥಿಗಳು ನಿಗದಿಗೊಳಿಸಲು ವಿವಿಗಳು ಮುಂದಾಗಿದ್ದು, ಕೊರೋನಾ ನಿಯಮಗಳನ್ನು ಪಾಲಿಸುವುದರೊಂದಿಗೆ ಕಾಲೇಜ್ ಗಳನ್ನು ಆರಂಭಿಸಲಾಗುವುದು.