
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಪಟ್ಟಣದ ಜೂನಿಯರ್ ಕಾಲೇಜಿನಲ್ಲಿ ಮೇಲ್ಛಾವಣಿ ಹೆಂಚು ಬಿದ್ದು ವಿದ್ಯಾರ್ಥಿನಿ ಗಾಯಗೊಂಡಿದ್ದಾರೆ.
ಬಿರುಗಾಳಿ ಸಹಿತ ಭಾರಿ ಮಳೆಯಿಂದಾಗಿ ಹೆಂಚು ಬಿದ್ದು ಅವಘಡ ಸಂಭವಿಸಿದೆ. ವಿದ್ಯಾರ್ಥಿನಿ ತಲೆ ಮೇಲೆ ಹೆಂಚು ಬಿದ್ದು, ತೀವ್ರ ರಕ್ತಸ್ರಾವವಾಗಿದೆ. ಶಾಲಾ, ಕಾಲೇಜುಗಳಲ್ಲಿ ಕುಳಿತುಕೊಳ್ಳಲು ವಿದ್ಯಾರ್ಥಿಗಳಿಗೆ ಆತಂಕ ಎದುರಾಗಿದೆ. ಮಳೆ ಇದ್ದರೂ ಕಾಲೇಜಿಗೆ ರಜೆ ನೀಡಲು ಅಧಿಕಾರಿಗಳು ಹಿಂದೇಟು ಹಾಕಿದ್ದಾರೆ ಎನ್ನಲಾಗಿದೆ.