ಬೆಂಗಳೂರು : ರಾಜ್ಯದಲ್ಲಿ ಕಲರ್ ‘ಕಾಟನ್ ಕ್ಯಾಂಡಿ’ ಬ್ಯಾನ್ ಮಾಡಲಾಗಿದ್ದು, ಗೋಬಿ ಮಂಚೂರಿಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸದಂತೆ ಸರ್ಕಾರ ಖಡಕ್ ಸೂಚನೆ ನೀಡಿದೆ.
ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದು, ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾದರಿಯನ್ನು ಸಂಗ್ರಹಿಸಿದ್ದು, ಇವುಗಳಲ್ಲಿಬಳಸುವ ಕೃತಕ ಬಣ್ಣಗಳಲ್ಲಿಹಾನಿಕಾರಕ ರಾಸಾಯನಿಕ ಇರುವುದು ಪತ್ತೆಯಾಗಿದೆ . ಕಾಟನ್ ಕ್ಯಾಂಡಿ ಬ್ಯಾನ್ ಮಾಡಲಾಗಿದ್ದು, ಮಾರಾಟ ಮಾಡಿದರೇ ಮತ್ತು ಗೋಬಿ ಮಂಚೂರಿಯ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣ ಬಳಸಿದರೇ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ನಿಯಮ 59ರ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದರು.
ಕಲರ್ ಕಾಟನ್ ಕ್ಯಾಂಡಿಯಲ್ಲಿ ಹಾನಿಕಾರಕ ರೋಡಮೈನ್ ಹಾಗೂ ರಾಸಾಯನಿಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ಕಾಟನ್ ಕ್ಯಾಂಡಿ ನಿಷೇಧಿಸಲು ಆರೋಗ್ಯ ಇಲಾಖೆ ಕ್ರಮ ಕೈಗೊಂಡಿದೆ. ಗೋಬಿ ಮಂಚೂರಿಯನ್ನು ಬ್ಯಾನ್ ಮಾಡದ ಸರ್ಕಾರ ಗೋಬಿ ಮಂಚೂರಿ ತಯಾರಿಕೆಯಲ್ಲಿ ಕೃತಕ ಬಣ್ಣ ಬಳಸದಂತೆ ಸೂಚನೆ ನೀಡಿದೆ.