ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಮೇ 28ರಂದು ಕಾಮೆಡ್ –ಕೆ, ಯು ಗೇಟ್, ಯುನಿಗೇಜ್ ಪ್ರವೇಶ ಪರೀಕ್ಷೆ ನಡೆಸಲಾಗುವುದು.
ರಾಜ್ಯದಲ್ಲಿನ 150 ಇಂಜಿನಿಯರಿಂಗ್ ಕಾಲೇಜು, ದೇಶದ 55ಕ್ಕೂ ಅಧಿಕ ಪ್ರತಿಷ್ಠಿತ ಖಾಸಗಿ ಮತ್ತು ಡೀಮ್ಡ್ ವಿವಿಗಳಲ್ಲಿ ಇಂಜಿನಿಯರಿಂಗ್ ಕೋರ್ಸ್ ಪ್ರವೇಶಕ್ಕೆ ಕಾಮೆಡ್ –ಕೆ ಯುಗೇಟ್ ಮತ್ತು ಯುನಿಗೇಜ್ ಪ್ರವೇಶ ಪರೀಕ್ಷೆ ನಡೆಯಲಿದೆ.
ರಾಜ್ಯದ ಅನುದಾನ ರಹಿತ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ ಸಂಘದೊಂದಿಗೆ ಸಂಯೋಜನೆಗೊಂಡಿರುವ ಕಾಲೇಜುಗಳು ಮತ್ತು ಬಿಇ, ಬಿಟೆಕ್ ಕೋರ್ಸ್ ಹೊಂದಿರುವ ಯುನಿ ಗೇಜ್ ವಿವಿಗಳಿಗೆ ಪ್ರವೇಶ ಪರೀಕ್ಷೆ ನಡೆಸಲಾಗುವುದು.
ದೇಶದ 150ಕ್ಕೂ ಹೆಚ್ಚು ನಗರಗಳಲ್ಲಿನ 400 ಪರೀಕ್ಷಾ ಕೇಂದ್ರಗಳಲ್ಲಿ ಆನ್ಲೈನ್ ಪರೀಕ್ಷೆ ನಡೆಯಲಿದೆ. ರಾಜ್ಯ ಸರ್ಕಾರ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ ಆಡಳಿತ ಮಂಡಳಿಗಳಿಗೆ ಶೇಕಡ 45ರಷ್ಟು ಸೀಟುಗಳನ್ನು ನೀಡಿದೆ. ಈ ಕೋಟಾದಲ್ಲಿ ರಾಜ್ಯದಲ್ಲಿ 22 ಸಾವಿರ ಸೀಟುಗಳು ಲಭ್ಯ ಇವೆ. ಅವುಗಳನ್ನು ಭರ್ತಿ ಮಾಡಿಕೊಳ್ಳಲು ಪ್ರವೇಶ ಪರೀಕ್ಷೆ ನಡೆಯಲ್ಲಿದ್ದು, ದೇಶದ ಯಾವುದೇ ಭಾಗದ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ ಪ್ರವೇಶ ಪಡೆದುಕೊಳ್ಳಬಹುದಾಗಿದೆ.
www.comedk.org, www.unigauge.com ವೆಬ್ಸೈಟ್ ಗಳಲ್ಲಿ ಏಪ್ರಿಲ್ 24ರ ವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.