alex Certify ಇಂಜಿನಿಯರಿಂಗ್ ಸೇರಬಯಸುವ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಮೇ 28ರಂದು ಕಾಮೆಡ್ –ಕೆ ಪ್ರವೇಶ ಪರೀಕ್ಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂಜಿನಿಯರಿಂಗ್ ಸೇರಬಯಸುವ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಮೇ 28ರಂದು ಕಾಮೆಡ್ –ಕೆ ಪ್ರವೇಶ ಪರೀಕ್ಷೆ

ಬೆಂಗಳೂರು: ಖಾಸಗಿ ಕಾಲೇಜು ಮತ್ತು ವಿವಿಗಳಲ್ಲಿರುವ ಮ್ಯಾನೇಜ್ಮೆಂಟ್ ಕೋಟಾ ಇಂಜಿನಿಯರಿಂಗ್ ಸೀಟುಗಳ ಭರ್ತಿಗೆ 2023 ನೇ ಸಾಲಿನ ಕಾಮೆಡ್ -ಕೆ ಪರೀಕ್ಷೆ ಮೇ 28ರಂದು ನಡೆಯಲಿದೆ.

ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದ್ದು, ಏಪ್ರಿಲ್ 24 ಕೊನೆಯ ದಿನವಾಗಿದೆ. ಆನ್ ಲೈನ್ ಮೂಲಕವೇ ಪರೀಕ್ಷೆ ನಡೆಯಲಿದ್ದು, ರಾಜ್ಯದ 150 ಇಂಜಿನಿಯರಿಂಗ್ ಕಾಲೇಜು 50 ಕ್ಕೂ ಹೆಚ್ಚು ಖಾಸಗಿ ಮತ್ತು ಡೀಮ್ಡ್ ವಿವಿಗಳಲ್ಲಿ ಖಾಲಿ ಇರುವ ಸುಮಾರು 20 ಸಾವಿರ ಸೀಟುಗಳಿಗೆ ಪರೀಕ್ಷೆ ನಡೆಸಲಾಗುವುದು.

ಮೇ 28ರ ಭಾನುವಾರ ಕಾಮೆಡ್ –ಕೆ, ಯುಗೇಟ್ ಮತ್ತು ಯುನಿಗೇಜ್ ಪ್ರವೇಶ ಪರೀಕ್ಷೆ ನಡೆಯಲಿವೆ ಎಂದು ಕಾಮೆಡ್ –ಕೆ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ. ಕುಮಾರ್ ಹೇಳಿದ್ದಾರೆ. ದೇಶದಾದ್ಯಂತ 150ಕ್ಕೂ ಹೆಚ್ಚು ನಗರಗಳಲ್ಲಿ 400 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. www.comedk.org ವೆಬ್ ಸೈಟ್ ಗಮನಿಸಬಹುದಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...