alex Certify ದೇಶಾದ್ಯಂತ ನಾಳೆ ಕಾಮೆಡ್ -ಕೆ ಪರೀಕ್ಷೆ: ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇಶಾದ್ಯಂತ ನಾಳೆ ಕಾಮೆಡ್ -ಕೆ ಪರೀಕ್ಷೆ: ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯದ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳು ಮತ್ತು ಕಾಮೆಡ್ -ಕೆ ಪ್ಯಾನ್ ಇಂಡಿಯಾ ಸದಸ್ಯ ವಿವಿಗಳಲ್ಲಿ ಆಡಳಿತ ಮಂಡಳಿ ಕೋಟಾ ಸೀಟುಗಳ ಪ್ರವೇಶಕ್ಕೆ ಮೇ 28ರ ಭಾನುವಾರ ದೇಶಾದ್ಯಂತ 264 ಕೇಂದ್ರಗಳಲ್ಲಿ ಕಾಮೆಡ್ –ಕೆ ಯುಜಿಇಟಿ ಪರೀಕ್ಷೆ ನಡೆಯಲಿದೆ.

180 ನಗರಗಳ 264 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 90,607 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಕಂಪ್ಯೂಟರ್ ಆಧಾರಿತ ಪರೀಕ್ಷೆ ಇದಾಗಿದ್ದು, ಬೆಳಗ್ಗೆ ಮತ್ತು ಮಧ್ಯಾಹ್ನ ಎರಡು ಹಂತದಲ್ಲಿ ನಡೆಸಲಾಗುವುದು. ಭಾನುವಾರ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ಮೊದಲ ಹಂತದ ಪರೀಕ್ಷೆ, ಮಧ್ಯಾಹ್ನ 2 ರಿಂದ 5 ಗಂಟೆಯವರೆಗೆ ಎರಡನೇ ಹಂತದ ಪರೀಕ್ಷೆ ನಡೆಯಲಿದ್ದು, ಎಲ್ಲ ವಿದ್ಯಾರ್ಥಿಗಳು ನಿಗದಿತ ಸಮಯಕ್ಕೆ ಪರೀಕ್ಷಾ ಕೇಂದ್ರಗಳಲ್ಲಿ ಹಾಜರಾಗುವಂತೆ ಕಾಮೆಡ್ -ಕೆ ಅಧಿಕಾರಿಗಳು ತಿಳಿಸಿದ್ದಾರೆ.

ಪರೀಕ್ಷಾ ಪ್ರವೇಶ ಪತ್ರ, ಮಾನ್ಯತೆ ಇರುವ ಯಾವುದಾದರೂ ಒಂದು ಗುರುತಿನ ಚೀಟಿ, ಎರಡು ಪಾಸ್ ಪೋರ್ಟ್ ಅಳತೆಯ ಫೋಟೋ ತರಬೇಕು.

ಇದು ಅಖಿಲ ಭಾರತ ಮಟ್ಟದ ಪರೀಕ್ಷೆಯಾಗಿರುವುದರಿಂದ ಸರ್ಕಾರದ ಮಾರ್ಗದರ್ಶನದಂತೆ ಪೂರ್ಣ ತೋಳಿನ ಉಡುಪು, ಫುಲ್ ಶರ್ಟ್, ಬೆಲ್ಟ್, ಕಿವಿಯೋಲೆ ಸೇರಿದಂತೆ ಯಾವುದೇ ರೀತಿಯ ಆಭರಣ, ವಾಚ್, ಕ್ಯಾಲ್ಕುಲೇಟರ್ ಸೇರಿದಂತೆ ಎಲ್ಲಾ ರೀತಿಯ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ನಿಷೇಧಿಸಲಾಗಿದೆ. ಪೆನ್ಸಿಲ್, ವಾಟರ್ ಬಾಟಲ್ ತರಲು ಮಾತ್ರ ಅವಕಾಶವಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...