
ಬೆಂಗಳೂರು: ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸೀಟ್ ಬ್ಲಾಕಿಂಗ್ ದಂಧೆಗೆ ಕಡಿವಾಣ ಹಾಕಲು ಹೊಸ ನಿಯಮ ತರಲಾಗಿದೆ.
ಕಾಮೆಡ್ ಕೆ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌನ್ಸಿಲಿಂಗ್ ಸಂದರ್ಭದಲ್ಲಿ ಸಂಪೂರ್ಣ ಶುಲ್ಕವನ್ನು ಪಡೆಯಲು ನಿರ್ಧರಿಸಲಾಗಿದೆ. ವಿದ್ಯಾರ್ಥಿಗಳು ಕೌನ್ಸೆಲಿಂಗ್ ಸಂದರ್ಭದಲ್ಲಿ ಬೋಧನಾ 55 ಸಾವಿರ ರೂ ಶುಲ್ಕವನ್ನು ಮಾತ್ರ ಪಾವತಿಸಿ ಸೀಟ್ ಖಚಿತಪಡಿಸಿಕೊಳ್ಳಬಹುದಾಗಿದೆ. ಕೆಲವರು ಸೀಟ್ ಬ್ಲಾಕ್ ಮಾಡುವುದರಿಂದ ಅದನ್ನು ತಡೆಯುವ ಉದ್ದೇಶದಿಂದ ಸಂಪೂರ್ಣ ಶುಲ್ಕವನ್ನು ಕೌನ್ಸೆಲಿಂಗ್ ಹಂತದಲ್ಲಿಯೇ ಪಡೆಯಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ.