ನವದೆಹಲಿ : ಲೋಕಸಭಾ ಚುನಾವಣೆ ನಡೆಸಲು ಆಯೋಗ ಸರ್ವಸನ್ನದ್ಧವಾಗಿದೆ, ದೇಶಾದ್ಯಂತ ಮೊದಲ ಬಾರಿಗೆ 1.8 ಕೋಟಿ ಮತದಾರರು ಮತ ಚಲಾಯಿಸಲಿದ್ದಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ದೆಹಲಿಯ ವಿಜ್ಞಾನ ಭವನದಲ್ಲಿ ನಡೆಯುತ್ತಿರುವ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಯೊಂದು ಚುನಾವಣೆಯೂ ನಮಗೆ ಪರೀಕ್ಷೆ ಇದ್ದಂತೆ. ಮುಕ್ತ ನ್ಯಾಯಸಮ್ಮತ, ಪಾರದರ್ಶಕ ಚುನಾವಣೆ ನಮ್ಮ ಉದ್ದೇಶವಾಗಿದೆ. ದೇಶಾದ್ಯಂತ 97 ಕೋಟಿ ಮತದಾರರು ಮತ ಚಲಾಯಿಸಲಿದ್ದಾರೆ. ದೇಶಾದ್ಯಂತ 10.5 ಲಕ್ಷ ಮತದಾನ ಕೇಂದ್ರಗಳು ಇದ್ದು, ಮೊದಲ ಬಾರಿಗೆ 1.8 ಕೋಟಿ ಮತದಾರರು ಮತ ಚಲಾಯಿಸಲಿದ್ದಾರೆ , ಚುನಾವಣಾ ಕರ್ತವ್ಯಕ್ಕೆ ಒಂದೂವರೆ ಕೋಟಿ ಸಿಬ್ಬಂದಿ ಬಳಕೆ ಮಾಡಲಾಗುವುದು. ಮತದಾನಕ್ಕೆ ಒಟ್ಟು 55 ಲಕ್ಷ ಇವಿಎಂಗಳ ವ್ಯವಸ್ಥೆ ಮಾಡಲಾಗುವುದು ಎಂದರು.
ಲೋಕಸಭಾ ಚುನಾವಣೆ 2024 ರ ಮೆಗಾ ಮತದಾನಕ್ಕೆ ಸೇರುವಂತೆ ಮತದಾರರಿಗೆ ಸಿಇಸಿ ರಾಜೀವ್ ಕುಮಾರ್ ಕರೆ ನೀಡಿದ್ದಾರೆ. ಪ್ರತಿ ಚುನಾವಣೆಯು ಸಂವಿಧಾನವು ವಹಿಸಿದ ಪವಿತ್ರ ಜವಾಬ್ದಾರಿ ಎಂದು ಅವರು ಹೇಳಿದರು. ನಮಗೆ ವಹಿಸಿದ ಜವಾಬ್ದಾರಿಯನ್ನು ಚುನಾವಣಾ ಆಯೋಗವು ನಮ್ರತೆ ಮತ್ತು ಶ್ರದ್ಧೆಯಿಂದ ತೆಗೆದುಕೊಳ್ಳುತ್ತದೆ, ನ್ಯಾಯಸಮ್ಮತ ಮತ್ತು ಪಾರದರ್ಶಕ ಚುನಾವಣೆಗೆ ಬದ್ಧತೆ ಸ್ಥಿರವಾಗಿದೆ ಎಂದರು.